ದಕ್ಷಿಣ ಕನ್ನಡ: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣ ಸಂಬಂಧಿಸಿದಂತೆ ನಾಲ್ಕನೇ ದಿನದ ಕಾರ್ಯಾಚರಣೆ ವೇಳೆ ಮಹತ್ವದ ಬೆಳವಣಿಗೆ ಕಂಡುಬಂದಿದ್ದು ಕೊನೆಗೂ ದೂರುದಾರ ಗುರುತಿಸಿದ್ದ 6ನೇ ಪಾಯಿಂಟ್‌ನಲ್ಲಿ ಎರಡು ಅಸ್ಥಿಪಂಜರಗಳು ಪತ್ತೆಯಾಗಿದೆ.
ದೂರುದಾರ ಗುರುತಿಸಿದ ಸ್ಥಳಗಳ ಪೈಕಿ ಇದೀಗ 6ನೇ ಪಾಯಿಂಟ್‌ನಲ್ಲಿ 15 ಕಾರ್ಮಿಕರಿಂದ ಉತ್ಖನನ ನಡೆಯುತ್ತಿದ್ದು, ಎರಡು ಅಸ್ಥಿಪಂಜರ ಪತ್ತೆಯಾಗಿದೆ. ದೇಹದ ಪೂರ್ತಿ ಭಾಗಗಳು ಸಿಕ್ಕಿಲ್ಲ, ತಲೆ ಬುರುಡೆ ಸೇರಿದಂತೆ ಕೆಲವು ಭಾಗಗಳು ಮಾತ್ರ ಸಿಕ್ಕಿದ್ದು, ಇನ್ನೂ ಆಳಕ್ಕೆ ತೆಗೆದು ಹುಡುಕಾಟ ನಡೆಸಲಾಗುತ್ತಿದೆ. ಸದ್ಯ ಸಿಕ್ಕಿರುವ ಕಳೇಬರವನ್ನು ಎಸ್‌ಐಟಿ ಅಧಿಕಾರಿಗಳು ಎಫ್‌ಎಸ್‌ಎಲ್‌ಗೆ (FSL) ಕಳುಹಿಸಲಿದ್ದಾರೆ. ಇನ್ನೂ ಇದರ ಬಳಿಕ 7 ಹಾಗೂ 8ನೇ ಪಾಯಿಂಟ್‌ನಲ್ಲಿ ಉತ್ಖನನ ಕಾರ್ಯ ನಡೆಸುವ ಸಾಧ್ಯತೆಗಳಿವೆ.