ಕೋಲಾರ : ಗುತ್ತಿಗೆದಾರನಿಗೆ ಜಾತಿ ನಿಂದನೆ ಹಾಗೂ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಂಬಂಧಪಟ್ಟಂತೆ ರಾಜರಾಜೇಶ್ವರಿ ನಗರದ ಶಾಸಕ ಬಿಜೆಪಿಯ ಮುನಿರತ್ನ ಅವರನ್ನು ಬಂಧಿಸಲಾಗಿದೆ.
ಮುನಿರತ್ನ ವಿರುದ್ಧ ಗುತ್ತಿಗೆದಾರ ಚಲುವರಾಜು ಎಂಬವರು ನಂದಿನಿ ವೈಯ್ಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಅವಾಚ್ಯ ಶಬ್ದ ಬಳಸಿ ಬೆದರಿಕೆ, ಜಾತಿ ನಿಂದನೆ ಮಾಡಿದ್ದಾರೆ ಅಂತ ಆರೋಪಿಸಿದ್ದರು. ಈ ಸಂಬಂಧ ಮುನಿರತ್ನ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಪ್ರಕರಣ ದಾಖಲಾಗುತ್ತಿದ್ದಂತೆ ಮುನಿರತ್ನ ಕೋಲಾರ ಮೂಲಕ ಆಂಧ್ರ ಪ್ರದೇಶದೆಡೆಗೆ ಪ್ರಯಾಣ ಬೆಳೆಸುತ್ತಿದ್ದರು ಎನ್ನಲಾಗಿದೆ. ಈ ವೇಳೆ ಪೊಲೀಸರು ಅವರನ್ನು ಬಂಧಿಸಿದ್ದಾರೆ.



