Thursday, July 30, 2026
Homeಕ್ರೈಮ್ಚಿಕ್ಕಮಗಳೂರು:‌ ಮಹಿಳೆ ಮೇಲೆ ಹಲ್ಲೆ, ಕೊಲೆ ಯತ್ನ : ಕಾಂಗ್ರೆಸ್ ಮುಖಂಡ ರಾಹಿಲ್ ಶರೀಫ್‌ ಅರೆಸ್ಟ್!

ಚಿಕ್ಕಮಗಳೂರು:‌ ಮಹಿಳೆ ಮೇಲೆ ಹಲ್ಲೆ, ಕೊಲೆ ಯತ್ನ : ಕಾಂಗ್ರೆಸ್ ಮುಖಂಡ ರಾಹಿಲ್ ಶರೀಫ್‌ ಅರೆಸ್ಟ್!

Telegram Group
Join Now

ಚಿಕ್ಕಮಗಳೂರು: ನಗರದ ಹೌಸಿಂಗ್ ಬೋರ್ಡ್ ಬಡಾವಣೆಯಲ್ಲಿ ಕಾಂಗ್ರೆಸ್ ಮುಖಂಡೆ ಚೇತನಾ ಅವರ ಮೇಲೆ ಲಾಂಗ್‌ನಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ್ದ ಪ್ರಕರಣಕ್ಕೆ ಇದೀಗ ದೊಡ್ಡ ತಿರುವು ಸಿಕ್ಕಿದೆ. ಘಟನೆ ನಡೆದ ನಂತರ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ, ಕಾಂಗ್ರೆಸ್ ಮುಖಂಡ ರಾಹಿಲ್ ಶರೀಫ್‌ನನ್ನು ಜಿಲ್ಲಾ ಪೊಲೀಸರು ಭಾರತ ಮತ್ತು ನೇಪಾಳದ ಗಡಿ ಭಾಗದಲ್ಲಿ ಯಶಸ್ವಿಯಾಗಿ ಬಂಧಿಸಿದ್ದಾರೆ.

ಕಳೆದ ವಾರ ಚೇತನಾ ಅವರ ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದ ರಾಹಿಲ್, ಕೃತ್ಯದ ಬಳಿಕ ಪೊಲೀಸರ ಕಣ್ಣು ತಪ್ಪಿಸಿ ಪರಾರಿಯಾಗಿದ್ದನು. ಆರೋಪಿಯ ಪತ್ತೆಗಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ಅವರು ವಿಶೇಷ ತಂಡವನ್ನು ರಚಿಸಿದ್ದು, ಇನ್ಸ್‌ಪೆಕ್ಟರ್ ಅಭಯಪ್ರಕಾಶ್ ನೇತೃತ್ವದ ತಂಡವು ಹಗಲಿರುಳು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಹೆಡೆಮುರಿ ಕಟ್ಟಿದೆ.

ಸದ್ಯ ಪೊಲೀಸ್ ಕಸ್ಟಡಿಯಲ್ಲಿರುವ ರಾಹಿಲ್ ಶರೀಫ್‌ನನ್ನು ಚಿಕ್ಕಮಗಳೂರಿಗೆ ಕರೆತರಲಾಗುತ್ತಿದ್ದು, ಹಲ್ಲೆಗೆ ನಿಖರ ಕಾರಣವೇನು ಎಂಬ ಬಗ್ಗೆ ಹೆಚ್ಚಿನ ವಿಚಾರಣೆ ನಡೆಯಲಿದೆ. ಈ ಬಂಧನದ ಮೂಲಕ ವಾರದಿಂದ ನಡೆಯುತ್ತಿದ್ದ ಹೈಡ್ರಾಮಕ್ಕೆ ಪೊಲೀಸರು ಅಂತ್ಯ ಹಾಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments