ಚಿಕ್ಕಮಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ NIA ಅಧಿಕಾರಿಗಳು ದಕ್ಷಿಣ ಕನ್ನಡ ಹಾಘೂ ಚಿಕ್ಕಮಗಳುರು ಜಿಲ್ಲೆಯಲ್ಲಿ ಬೀಡು ಬಿಟ್ಟಿದ್ದಾರೆ.ಈಗ ಚಿಕ್ಕಮಗಳೂರು ಜಿಲ್ಲೆಯ ಕೆಲವು ಕಡೆ ಭೇಟಿ ನೀಡಿ ಮಾಹಿತಿ ಕಲೆ ಹಾಕಲಿದ್ದಾರೆ.ಕಳಸಾ ಸಮೀಪದ ಹೋಂಸ್ಟೇ ಒಂದರಲ್ಲಿ ವಾಸ್ತವ್ಯ ಹೂಡಿದ್ದ ಅನುಮಾನ ಹಿನ್ನೆಲೆಯಲ್ಲಿ ತಾಲೂಕಿನ ಕೋಟೆಹೊಳೆ, ರುದ್ರಪಾದಕ್ಕೆ NIA ಅಧಿಕಾರಿಗಳು ಭೇಟಿ ನೀಡಿ ಮಾಹಿತಿ ಕಲೆ ಹಾಕಲಿದ್ದಾರೆ.

ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಇಬ್ಬರು ಆರೋಪಿಗಳು ಕಳಸಾ ಮೂಲದವರೆಂದು ತಿಳಿದುಬಂದಿದ್ದು ಅವರ ಮನೆಗಳಿಗೂ ಭೇಟಿ ನೀಡಿ ಮಾಹಿತಿ ಕಲೆ ಹಾಕಲಿದ್ದಾರೆ.

ಮೇ 1 ರಂದು ಫಾಜಿಲ್ ಹತ್ಯೆಯ ಆರೋಪಿ ಸುಹಾಸ್ ಶೆಟ್ಟಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಹತ್ಯೆಗೆ ದೇಶ, ವಿದೇಶಗಳಿಂದ ಫಂಡಿಂಗ್ ಆಗಿದೆ. ರಾಜ್ಯದ ಪೊಲೀಸ್ ಇಲಾಖೆಯಿಂದ ನಿಸ್ಪಕ್ಷಪಾತವಾಗಿ ತನಿಖೆ ನಡೆಸಲು ಸಾಧ್ಯವಿಲ್ಲ. ಹೀಗಾಗಿ ಎನ್‌ಐಎಗೆ ಒಪ್ಪಿಸಬೇಕೆಂದು ಆಗ್ರಹಿಸಿ ಬಿಜೆಪಿ, ಸೇರಿದಂತೆ ಹಿಂದೂಪರ ಕಾರ್ಯರ್ತರು ಆಗ್ರಹಿಸಿದ್ದರು. ಸುಹಾಸ್ ಶೆಟ್ಟಿ ಹತ್ಯೆ ಕೇಸ್‌ನಲ್ಲಿ ಈಗಾಗಲೇ ಪೊಲೀಸರು 11 ಮಂದಿಯನ್ನು ಬಂಧಿಸಿದ್ದಾರೆ