ಧಾರವಾಡ : ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ್ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಫಯಾಜ್ ನನ್ನು ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.ಸಿಐಡಿ ಅಧಿಕಾರಿಗಳ ತಂಡ ಆತನನ್ನು ವಿಚಾರಣೆಗೆ ಒಳಪಡಿಸಲಿದೆ.
ಧಾರವಾಡದ ಒಂದನೇ ಜೆಎಂಎಫ್ ಸಿ ಕೋರ್ಟ್ ಇಂದು ನೇಹಾ ಹತ್ಯೆ ಪ್ರಕರಣದ ಆರೋಪಿಯನ್ನು ಆರು ದಿನಗಳ ಸಿಐಡಿಗೆ ನೀಡಿ ಆದೇಶ ಹೋರಡಿಸಿದ್ದು, ಈ ಹಿನ್ನೆಲೆಯಲ್ಲಿ ಧಾರವಾಡದ ಕಾರಾಗೃಹದಲ್ಲಿ ಆರೋಪಿ ಫಯಾಜ್ ನನ್ನು ಸಿಐಡಿ ಅಧಿಕಾರಿಗಳ ತಂಡ ವಶಕ್ಕೆ ಪಡೆದುಕೊಂಡಿದೆ.
ಈಗಾಗಲೇ ರಾಜ್ಯ ಸರ್ಕಾರವು ನೇಹಾ ಹತ್ಯೆ ಪ್ರಕರಣವನ್ನು ಸಿಐಡಿಗೆ ವಹಿಸಿ ಆದೇಶ ಹೊರಡಿಸಿದ ಬೆನ್ನಲ್ಲೇ ಕೋರ್ಟ್ ಫಯಾಜ್ ನನ್ನು ಸಿಐಡಿ ಕಸ್ಟಡಿಗೆ ನೀಡಿ ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ ಹೆಚ್ಚಿನ ವಿಚಾರಣೆಗೆ ಸಿಐಡಿ ಅಧಿಕಾರಿಗಳ ತಂಡ ಫಯಾಜ್ ನನ್ನು ವಶಕ್ಕೆ ಪಡೆದುಕೊಂಡಿದೆ.
