ಬೆಂಗಳೂರು : ಚಾಮರಾಜಪೇಟೆಯ ವಿನಾಯಕ ನಗರದಲ್ಲಿ ನಡೆದ ಹಸುವಿನ ಕೆಚ್ಚಲು ಕೊಯ್ದ ಅಹಿತಕರ ಘಟನೆಗೆ ಎಲ್ಲೆಡೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಘಟನೆ ನಡೆದ ದಿನ ಪ್ರತಿಕ್ರಿಯಿಸಿದ್ದ ಸಚಿವ ಜಮೀರ್ ಅಹ್ಮದ್ ಖಾನ್, ಹಸುವಿನ ಮಾಲೀಕರಿಗೆ ನಾನೇ ಮೂರು ಹಸುಗಳನ್ನು ಕೊಡಿಸುತ್ತೇನೆ ಎಂದಿದ್ದರು.
ಇದೀಗ ಹಸುವಿನ ಮಾಲೀಕರಿಗೆ ಸಚಿವ ಜಮೀರ್ ಅಹ್ಮದ್ ಖಾನ್ ಮೂರು ಹಸುಗಳನ್ನ ಖರೀದಿಸಿ ನೀಡಿದ್ದಾರೆ. ಹಸುವಿನ ಮಾಲೀಕ ಕರ್ಣ ಅವರ ತಾಯಿ ಸವರಿ ಅಮ್ಮಳ್, ಸಹೋದರಿ ಅಮುದಾ ಅವರಿಗೆ ಸಚಿವ ಜಮೀರ್ ಅಹಮದ್ ಖಾನ್ ಮೂರು ಲಕ್ಷ ರೂ. ವೆಚ್ಚದಲ್ಲಿ ಮೂರು ಹಸು ಖರೀದಿಸಿ ನೀಡಿದರು.
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಕೆಎಂಡಿಸಿ ಅಧ್ಯಕ್ಷ ಅಲ್ತಾಫ್ ಖಾನ್, ಮುಖಂಡರಾದ ಅತುಶ್, ಗೌಸಿ, ವಿನಾಯಕ್, ಪ್ರಸಾದ್, ಸ್ಥಳೀಯರು ಈ ಸಂದರ್ಭ ಇದ್ದರು.
