Wednesday, March 25, 2026
Homeಕ್ರೈಮ್ಲಿಫ್ಟ್ ನೀಡುವ ನೆಪದಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ: ತಲೆ ಗಂಭೀರ ಗಾಯಗೊಳಿಸಿ ಕಾಡಿಗೆಸೆದ ಕಾಮುಕರು

ಲಿಫ್ಟ್ ನೀಡುವ ನೆಪದಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ: ತಲೆ ಗಂಭೀರ ಗಾಯಗೊಳಿಸಿ ಕಾಡಿಗೆಸೆದ ಕಾಮುಕರು

ಹರಿಯಾಣ : ಫರಿದಾಬಾದ್‌ನಲ್ಲಿ ದೇಶವೇ ಬೆಚ್ಚಿ ಬೀಳುವ ಆಘಾತಕಾರಿ ಘಟನೆ ನಡೆದಿದೆ. ನಿರ್ಭಯ ಪ್ರಕರಣದಂತೆ ಲಿಫ್ಟ್ ನೀಡುವುದಾಗಿ ನಂಬಿಸಿ 25 ವರ್ಷದ ಯುವತಿಯನ್ನು ಅಪಹರಿಸಿ, ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ತಲೆಗೆ ಗಂಭೀರವಾಗಿ ಗಾಯಗೊಳಿಸಿ ಕಾಡಿಗೆ ಬಿಸಾಕಿರುವ ಘಟನೆ ನಡೆದಿದೆ.

ಡಿಸೆಂಬರ್ 29ರ ರಾತ್ರಿ ಈ ನೀಚ ಕೃತ್ಯ ನಡೆದಿದೆ. ಸಂತ್ರಸ್ತ ಯುವತಿ ತನ್ನ ತಾಯಿಯೊಂದಿಗೆ ವಾಸಿಸುತ್ತಿದ್ದು, ಅಂದು ಸಂಜೆ ತಾಯಿಯೊಂದಿಗೆ ಸಣ್ಣ ವಾದ ನಡೆದಿದ್ದರಿಂದ ಮನನೊಂದು ರಾತ್ರಿ ಸುಮಾರು 8:30ಕ್ಕೆ ತನ್ನ ಸ್ನೇಹಿತೆಯನ್ನು ಭೇಟಿಯಾಗಲು ಮನೆಯಿಂದ ಹೊರಟಿದ್ದಳು. ಸ್ನೇಹಿತೆಯನ್ನು ಭೇಟಿಯಾಗಿ ಮನೆಗೆ ಮರಳುತ್ತಿದ್ದಾಗ, ಮಧ್ಯರಾತ್ರಿ ಸುಮಾರು 12:30ರ ಸಮಯದಲ್ಲಿ ಮೆಟ್ರೋ ಚೌಕ್ ಬಳಿ ಆಟೋ ಚಾಲಕರೊಂದಿಗೆ ಮಾತನಾಡುತ್ತಾ ನಿಂತಿದ್ದಳು.

ಈ ಸಂದರ್ಭದಲ್ಲಿ ಒಂದು ವ್ಯಾನ್‌ನಲ್ಲಿ ಬಂದ ಆರೋಪಿಗಳು, ಯುವತಿಗೆ ಲಿಫ್ಟ್ ನೀಡುವುದಾಗಿ ನಂಬಿಸಿ ವಾಹನದೊಳಗೆ ಹತ್ತಿಸಿಕೊಂಡಿದ್ದಾರೆ.

ಆರೋಪಿಗಳು ಯುವತಿಯನ್ನು ಫರಿದಾಬಾದ್‌ನಿಂದ ಗುರುಗ್ರಾಮ್ ಕಡೆಗೆ ಕರೆದೊಯ್ದಿದ್ದಾರೆ. ದಾರಿಯ ಮಧ್ಯೆ ನಿರ್ಜನವಾದ ಅರಣ್ಯ ಪ್ರದೇಶದಲ್ಲಿ ವಾಹನವನ್ನು ನಿಲ್ಲಿಸಿ, ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಈ ಸಮಯದಲ್ಲಿ ಯುವತಿಯು ತೀವ್ರವಾಗಿ ಪ್ರತಿರೋಧ ತೋರಿದ್ದರಿಂದ, ಕ್ರೂರಿಗಳು ಆಕೆಯ ಮೇಲೆ ಹಲ್ಲೆ ನಡೆಸಿದ್ದಾರೆ. ಈ ದಾಳಿಯಿಂದಾಗಿ ಯುವತಿಯ ತಲೆಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಆಕೆಯ ತಲೆಗೆ 12 ಹೊಲಿಗೆಗಳನ್ನು ಹಾಕಲಾಗಿದೆ. ಅತ್ಯಾಚಾರದ ನಂತರ ಆರೋಪಿಗಳು ಆಕೆಯನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. 

ಡಿಸೆಂಬರ್ 30ರ ಮಧ್ಯಾಹ್ನ ಸುಮಾರು 3 ಗಂಟೆಯ ಹೊತ್ತಿಗೆ ಸಂತ್ರಸ್ತೆಯ ಕುಟುಂಬ ಸದಸ್ಯರು ಪೊಲೀಸ್ ಠಾಣೆಗೆ ಧಾವಿಸಿ ದೂರು ದಾಖಲಿಸಿದ್ದಾರೆ. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿದ ಪೊಲೀಸರು ತಕ್ಷಣವೇ ಎಫ್‌ಐಆರ್ (FIR) ದಾಖಲಿಸಿಕೊಂಡು ತನಿಖೆ ಆರಂಭಿಸಿದರು. ತಾಂತ್ರಿಕ ಸಾಕ್ಷ್ಯಗಳು ಮತ್ತು ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಪೊಲೀಸರು, ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಸದ್ಯ ಸಂತ್ರಸ್ತ ಯುವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪೊಲೀಸರು ಈ ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆಯನ್ನು ಮುಂದುವರಿಸಿದ್ದಾರೆ. ಈ ಘಟನೆಯು ಸಾರ್ವಜನಿಕರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕೆಂದು ಜನರು ಆಗ್ರಹಿಸುತ್ತಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!