ಶಿವಮೊಗ್ಗ : ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೊಸನಗರ ತಾಲೂಕಿನ ನರ್ತಿಗೆ ಗ್ರಾಮದಲ್ಲಿ ನಡೆದಿದೆ.
ಎನ್.ಟಿ. ತಿಮ್ಮಪ್ಪ (52) ಆತ್ಮಹತ್ಯೆಗೆ ಶರಣಾದ ರೈತ. ತನ್ನ ತೋಟದ ಕೆಲಸಕ್ಕೆ ತೆರಳಿದ್ದ ವೇಳೆ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬ್ಯಾಂಕ್ ಸೇರಿದಂತೆ ವಿವಿಧ ಸಂಘಸಂಸ್ಥೆಗಳಲ್ಲಿ ಸುಮಾರು 6 ಲಕ್ಷ 50 ಸಾವಿರ ಸಾಲ ಮಾಡಿದ್ದರು ಎನ್ನಲಾಗಿದೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
