ಹಾಸನ : ರಿಷಬ್ ಶೆಟ್ಟಿ ನಟಿಸಿ ನಿರ್ದೇಶಿಸುತ್ತಿರುವ ಕಾಂತಾರ-೧ ಸಿನಿಮಾ ತಂಡದ ವಿರುದ್ಧ ಅರಣ್ಯ ನಿಯಮ ಉಲ್ಲಂಘನೆ ಆರೋಪ ಕೇಳಿಬಂದಿದೆ. ಕಾಡುಪ್ರಾಣಿಗಳಿರುವ ಅರಣ್ಯ ಪ್ರದೇಶದಲ್ಲಿ ಬೆಂಕಿ ಹಚ್ಚಿ, ಪಟಾಕಿ ಸಿಡಿಸಿ ಚಿತ್ರೀಕರಣ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಹೀಗಾಗಿ ಚಿತ್ರತಂಡದ ವಿರುದ್ದ ಪರಿಸರ ಪ್ರೇಮಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಾಸನ ಜಿಲ್ಲೆಯ ಹೇರೂರು ಅರಣ್ಯ ಪ್ರದೇಶದಲ್ಲಿ ಸಿನಿಮಾದ ಚಿತ್ರೀಕರಣ ನಡೆಯುತ್ತಿದೆ. ಅರಣ್ಯ ಪ್ರದೇಶದಲ್ಲಿ ಸೆಟ್ ಹಾಕಿ ಚಿತ್ರೀಕರಣ ಮಾಡಲಾಗುತ್ತಿದೆ. ಪ್ರಶ್ನಿಸಿದ ಸ್ಥಳೀಯ ವ್ಯಕ್ತಿಗೆ ಹಲ್ಲೆ ಮಾಡಿದ್ದಾರೆ ಅಂತ ತಂಡದ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಗೋಮಾಳ ಪ್ರದೇಶದಲ್ಲಿ ಚಿತ್ರೀಕರಣ ಮಾಡುವ ಅನುಮತಿ ಪಡೆದು ಅರಣ್ಯ ಪ್ರದೇಶದಲ್ಲಿ ಚಿತ್ರೀಕರಣ ಮಾಡಲಾಗಿದೆ. ಅರಣ್ಯ ಸಚಿವರು ಈ ಸಂಬಂಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಪರಿಸರ ಪ್ರೇಮಿಗಳು ಆಗ್ರಹಿಸಿದ್ದಾರೆ.
ಅರಣ್ಯ ಪ್ರದೇಶದಲ್ಲಿ ಬೆಂಕಿ ಹಚ್ಚಿ ಬ್ಲಾಸ್ಟ್..? ಕಾಂತಾರ ೦೧ ಚಿತ್ರ ತಂಡದ ವಿರುದ್ಧ ಪರಿಸರ ಪ್ರೇಮಿಗಳ ಆಕ್ರೋಶ..!
RELATED ARTICLES
