ಉಡುಪಿ; ಕಾರ್ಕಳದಲ್ಲಿ ನಡೆದಿದೆ ಇಡೀ ರಾಜ್ಯವೇ ತಲೆತಗ್ಗಿಸುವ ಘಟನೆ ನಡೆದಿದೆ. ಯುವತಿಯನ್ನು ಅಪಹರಿಸಿ ಮತ್ತು ಬರುವ ಔಷಧ ನೀಡಿ ಸಾಮೂಹಿಕ ಅತ್ಯಾಚಾರವೆಸಗಿರುವ ಹೀನ ಘಟನೆ ನಡೆದಿದೆ.21 ವರ್ಷದ ಹಿಂದೂ ಯುವತಿಯೊಬ್ಬಳು ಅನ್ಯಕೋಮಿನ ಯುವಕರು ಅಪಹರಿಸಿ ಆಕೆಗೆ ಮದ್ಯದಲ್ಲಿ ಅಮಲು ಪದಾರ್ಥ ಬೆರೆಸಿ ಅದನ್ನು ಕುಡಿಸಿ ಸಾಮೂಹಿಕವಾಗಿ ಅತ್ಯಾಚಾರವೆಸಗಿದ್ದಾರೆ ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರು ಪೊಲೀಸರು ಬಂಧಿಸಿದ್ದಾರೆ. ಅಲ್ತಾಫ್ ಹಾಗೂ ಸುಬೇರ್ ಬಂಧಿತರು.
ಆರೋಪಿ ಅಲ್ತಾಫ್ ಗೆ ಇನ್ಸ್ಟಾಗ್ರಾಂ ಮೂಲಕ ಯುವತಿಯ ಪರಿಚಯ;ಇನ್ನು ಆರೋಪಿ ಅಲ್ತಾಫ್ ಗೆ ಇನ್ಸ್ಟಾಗ್ರಾಂ ಮೂಲಕ ಯುವತಿಯ ಪರಿಚಯವಾಗಿತ್ತು. ಅಲ್ಲಿ ಆಕೆಯ ಮೊಬೈಲ್ ನಂಬರ್ ಪಡೆದಿದ್ದ ಆತ ಆಕೆಯ ನಿನ್ನೆ ಅಂದಪೆ ಶುಕ್ರವಾರ ಪುಸಲಾಯಿಸಿ ಸುತ್ತಾಡಲು ಕರೆದುಕೊಂಡು ಹೋಗಿದ್ದಾನೆ. ನಂತರ ತನ್ನ ಇಬ್ಬರು ಸ್ನೇಹಿತರನ್ನು ಕರೆಸಿ ಬಿಯರ್ ಬಾಟಲಿ ತರಿಸಿ ಆ ಬಿಯರ್‌ನಲ್ಲಿ ಮಾದಕ ವಸ್ತು ಬೆರೆಸಿ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ ಎನ್ನಲಾಗಿದೆ.
ಅತ್ಯಾಚಾರವೆಸಗಿ ಆಕೆಯನ್ನು ಮನೆಯ ಬಳಿ ಬಿಟ್ಟು ಹೋಗಿದ್ದ ಆರೋಪಿಗಳು; ಯುವತಿಯ ಮೇಲೆ ಅತ್ಯಾಚಾರವೆಸಗಿದೆ ಆರೋಪಿಗಳು ಬಳಿಕ ಆಕೆಯ ಮನೆಯ ಬಳಿ ಬಿಟ್ಟು ಹೋಗಿದ್ದಾರೆ . ಸಂತ್ರಸ್ತೆಗೆ ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಬಯಲಾಗುತ್ತಿದ್ದಂತೆ ಆಸ್ಪತ್ರೆ ಬಳಿ ಹಿಂದೂ ಸಂಘಟನೆಗಳು ಜಮಾಯಿಸಿದ್ದು ಉಳಿದ ಆರೋಪಿಗಳನ್ನು ಬಂಧಿಸಬೇಕೆಂದು ಆಗ್ರಹಿಸಿವೆ.
ಉಡುಪಿ ಎಸ್ಪಿ ಹೇಳಿದ್ದೇನು?: ಘಟನೆ ಬಗ್ಗೆ ಉಡುಪಿ ಜಿಲ್ಲಾ ಎಸ್ ಪಿ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಕಾರ್ಕಳ ಠಾಣಾ ವ್ಯಾಪ್ತಿಯಲ್ಲಿ ಯುವತಿಯನ್ನು ಅಪಹರಿಸಿ ಅತ್ಯಾಚಾರಗೈದ ದೂರು ಬಂದಿದೆ. ಸಂತ್ರಸ್ತೆ ಮತ್ತು ಆರೋಪಿ ಮೂರು ತಿಂಗಳಿಂದ ಇನ್‌ಸ್ಟಾಗ್ರಾಮ್ ಮೂಲಕ ಪರಸ್ಪರ ಪರಿಚಯ ಹೊಂದಿದ್ದರು. ಶುಕ್ರವಾರ ಆರೋಪಿ ಅಲ್ತಾಫ್ ಕರೆ ಮಾಡಿ ಸಂತ್ರಸ್ತೆಗೆ ಬರಲು ಹೇಳಿದ್ದ. ಆಕೆ ಬಂದಾಗ ಕಾರಿನಲ್ಲಿ ಅಪಹರಿಸಿದ್ದಾನೆ.ಈ ನಡುವೆ ಮದ್ಯಪಾನದಲ್ಲಿ ಏನೋ ಬೆರೆಸಿ ಅತ್ಯಾಚಾರ ಮಾಡಿದ್ದಾಗಿ ಸಂತ್ರಸ್ತೆ ತಿಳಿಸಿದ್ದಾಳೆ. ಆರೋಪಿ ಅಲ್ತಾಫ್‌ನನ್ನು ಬಂಧಿಸಲಾಗಿದೆ. ಆರೋಪಿಗೆ ಬಿಯರ್ ಬಾಟಲ್ ತಂದುಕೊಟ್ಟಿದ್ದ ಇಬ್ಬರ ಪೈಕಿ ಸುಬೇರ್ ಎಂಬಾತನನ್ನು ಬಂಧಿಸಲಾಗಿದ್ದು ಕೃತ್ಯಕ್ಕೆ ಬಳಸಿದ ವಾಹನವನ್ನು ಜಪ್ತಿ ಮಾಡಲಾಗಿದೆ. ಸಂತ್ರಸ್ತೆಗೆ ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧಿಸಿದಂತೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.