Wednesday, March 25, 2026
Homeಕ್ರೈಮ್ಹಾಸನ: ಬೈಕ್‌ ಹಾಗೂ ಸಾರಿಗೆ ಬಸ್ ನಡುವೆ ಅಪಘಾತ: ಹೆಡ್‌ಕಾನ್ಸ್‌ಟೇಬಲ್‌ ಸಾವು!

ಹಾಸನ: ಬೈಕ್‌ ಹಾಗೂ ಸಾರಿಗೆ ಬಸ್ ನಡುವೆ ಅಪಘಾತ: ಹೆಡ್‌ಕಾನ್ಸ್‌ಟೇಬಲ್‌ ಸಾವು!

ಹಾಸನ: ಬೈಕ್‌ ಹಾಗೂ ಸಾರಿಗೆ ಬಸ್ ನಡುವೆ ನಡೆದ ಅಪಘಾತದಲ್ಲಿ ಹೆಡ್‌ಕಾನ್ಸ್‌ಟೇಬಲ್‌ ಸಾವನ್ನಪ್ಪಿದ ಘಟನೆ ಚನ್ನರಾಯಪಟ್ಟಣದಲ್ಲಿ ನಡೆದಿದೆ.

ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆಯಲ್ಲಿ ರೈಟರ್ ಆಗಿದ್ದ ಬೀರಲಿಂಗ (41) ಮೃತಪಟ್ಟ ಮುಖ್ಯಪೇದೆ. ಶುಕ್ರವಾರ ಮಧ್ಯಾಹ್ನ ಪೊಲೀಸ್ ಕ್ವಾಟರ್ಸ್‌ನಲ್ಲಿರುವ ಮನೆಗೆ ಊಟಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ಸಾರಿಗೆ ಬಸ್‌ ಬೈಕ್‌ಗೆ ಡಿಕ್ಕಿಯಾಗಿದೆ. ತೀವ್ರವಾಗಿ ಗಾಯಗೊಂಡಿದ್ದ ಬೀರಲಿಂಗ ಅವರನ್ನು ಬೆಳ್ಳೂರಿನ ಬಿಜಿಎಸ್ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. 

ಸ್ಥಳಕ್ಕೆ ಚನ್ನರಾಯಪಟ್ಟಣ ಸಂಚಾರಿ ಠಾಣೆ ‌ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!