Tuesday, February 24, 2026
Homeಕ್ರೈಮ್ಹಾಸನ: ಹೆಲ್ಮೆಟ್‌ ಹಾಕದೇ ಬುಲೆಟ್‌ನಲ್ಲಿ ಜಾಲಿ ರೈಡ್: ಹಂಪ್ಸ್ ಕಾಣದೇ ಬಿದ್ದು ಓರ್ವ ಯುವತಿ ಸಾವು,...

ಹಾಸನ: ಹೆಲ್ಮೆಟ್‌ ಹಾಕದೇ ಬುಲೆಟ್‌ನಲ್ಲಿ ಜಾಲಿ ರೈಡ್: ಹಂಪ್ಸ್ ಕಾಣದೇ ಬಿದ್ದು ಓರ್ವ ಯುವತಿ ಸಾವು, ಮತ್ತೊಬ್ಬಳ ಸ್ಥಿತಿ ಗಂಭೀರ!

ಹಾಸನ: ಬುಲೆಟ್ ಬೈಕ್ ಚಲಾಯಿಸುವಾಗ ಹಂಪ್ಸ್ ಕಾಣದೇ ಯುವತಿಯವರು ರಸ್ತೆಗೆ ಹಾರಿ ಬಿದ್ದಿದ್ದು, ಪರಿಣಾಮ ಓರ್ವ ಯುವತಿ ಸಾವನ್ನಪ್ಪಿರುವ ಘಟನೆ ಹಾಸನ ನಗರ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.

ಸತ್ಯಮಂಗಲ ಬಡಾವಣೆಯ ಪ್ರಿಯಾ (23) ಮೃತ ಯುವತಿ. ಮತ್ತೋರ್ವ ಯುವತಿ ಸ್ವಾತಿ (24) ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತ ಪ್ರಿಯಾ ಖಾಸಗಿ ಕಾಲೇಜಿನಲ್ಲಿ ಎಂಸಿಎ ಫೈನಲ್ ಇಯಿರ್ ಓದುತ್ತಿದ್ದಳು, ಸ್ವಾತಿಗೆ ಕಳೆದ ನವೆಂಬರ್‌ನಲ್ಲಿ ಮದುವೆಯಾಗಿತ್ತು ಎಂದು ತಿಳಿದುಬಂದಿದೆ.

ಇಬ್ಬರು ಯುವತಿಯರು ಹೆಲ್ಮೆಟ್ ಧರಿಸದೇ ಬುಲೆಟ್ ಬೈಕ್‌ನಲ್ಲಿ ಜಾಲಿ ರೈಡ್‌ಗೆ ಹೊರಟಿದ್ದರು. ಪ್ರಿಯಾ ಬೈಕ್ ಚಲಾಯಿಸುತ್ತಿದ್ದು, ಸ್ವಾತಿ ಹಿಂಬದಿ ಸೀಟ್‌ನಲ್ಲಿ ಕುಳಿತಿದ್ದಳು. ಈ ವೇಳೆ ಹಂಪ್ಸ್ ಕಾಣದೇ ಇಬ್ಬರು ರಸ್ತೆಗೆ ಹಾರಿ ಬಿದ್ದಿದ್ದಾರೆ. ಪರಿಣಾಮ ಓರ್ವ ಯುವತಿ ಸಾವನ್ನಪ್ಪಿದ್ದು, ಇನ್ನೋರ್ವಳ ಸ್ಥಿತಿ ಗಂಭೀರವಾಗಿದೆ. ಸದ್ಯ ಹೆಚ್ಚಿನ ಚಿಕಿತ್ಸೆಗಾಗಿ ಸ್ವಾತಿಯನ್ನು ಬೆಂಗಳೂರಿನ ಆಸ್ಪತ್ರೆ ರವಾನೆ ಮಾಡಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!