ಮೂಡಿಗೆರೆ: ಕ್ಯಾಂಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೆಂಗಳೂರು ಮೂಲದ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೂಡಿಗೆರೆ ತಾಲೂಕಿನ ಅಣಜೂರು ಗ್ರಾಮದ ಬಳಿ ನಡೆದಿದೆ.
ಬೆಂಗಳೂರಿನ ಬಾಣಸವಾಡಿ ಮೂಲದ ಶರತ್( 30) ಮೃತ ದುರ್ದೈವಿ. ಸ್ನೇಹಿತರ ಜೊತೆ ಚಿಕ್ಕಮಗಳೂರು ಪ್ರವಾಸಕ್ಕೆಂದು ಬಂದಿದ್ದ ವೇಳೆ ಅಣಜೂರು ಗ್ರಾಮದ ಬಳಿ ಮುಂದೆ ಬರುತ್ತಿದ್ದ ವಾಹನವನ್ನು ಓವರ್ ಟೇಕ್ ಮಾಡಲು ಹೋಗಿ ಕ್ಯಾಂಟರ್ ವಾಹನಕ್ಕೆ ನೇರವಾಗಿ ಡಿಕ್ಕಿ ಹೊಡೆದ ಪರಿಣಾಮ ಶರತ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಸ್ಥಳಕ್ಕೆ ಗೋಣಿಬೀಡು ಪೊಲೀಸರು ಆಗಮಿಸಿದ್ದು ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ. ಯುವಕನು ಪ್ರವಾಸಕ್ಕೆಂದು ಬಂದು ಅಕಾಲಿಕ ಮರಣ ಹೊಂದಿದ್ದು ಸ್ನೇಹಿತರು, ಕುಟುಂಬಸ್ಥರು ತೀವ್ರ ಶೋಕದಲ್ಲಿ ಮುಳುಗಿದ್ದಾರೆ.
