Wednesday, March 25, 2026
Homeಕ್ರೈಮ್ಕಾಪು ಬಳಿ ಭೀಕರ ಅಪಘಾತ:ಗೂಡ್ಸ್ ಟೆಂಪೋ ಪಲ್ಟಿಯಾಗಿ ಐವರ ಸಾವು: ನಾಲ್ವರ ಸ್ಥಿತಿ ಗಂಭೀರ!

ಕಾಪು ಬಳಿ ಭೀಕರ ಅಪಘಾತ:ಗೂಡ್ಸ್ ಟೆಂಪೋ ಪಲ್ಟಿಯಾಗಿ ಐವರ ಸಾವು: ನಾಲ್ವರ ಸ್ಥಿತಿ ಗಂಭೀರ!

ಕಾಪು: ಗೂಡ್ಸ್‌ ಟೆಂಪೋವೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಅದರಲ್ಲಿದ್ದ ಐವರು ಮೃತಪಟ್ಟ ಘಟನೆ ಕಾಪು ಸಮೀಪದ ಕೋತಲ್‌ಕಟ್ಟೆ ರಾಷ್ಟ್ರೀಯ ಹೆದ್ದಾರಿಯ 66ರಲ್ಲಿ ಸಂಭವಿಸಿದೆ.

ಕಾಪು ಮಜೂರಿನಿಂದ ಮಲ್ಪೆಗೆ ಡೆಕರೋಷನ್ ಸಂಬಂಧಿಸಿದ ಸಲಕರಣೆಗಳನ್ನು ಸಾಗಿಸುತ್ತಿದ್ದ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯ ಡಿವೈಡರ್‌ಗೆ ಹತ್ತಿ ರಸ್ತೆಯಲ್ಲಿ ಪಲ್ಟಿಯಾಗಿ ಬಿದ್ದಿದೆ ಎಂದು ತಿಳಿದುಬಂದಿದೆ.

ಟೆಂಪೋದಲ್ಲಿ ಒಟ್ಟು ಒಂಭತ್ತು ಮಂದಿ ಕೆಲಸಗಾರರು ಪ್ರಯಾಣಿಸುತ್ತಿದ್ದು,:ಐವರು ಮೃತಪಟ್ಟು ಹಲವು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.ಗಂಭೀರ ಗಾಯಗೊಂಡಿದ್ದ ನಾಲ್ವರು ಉಡುಪಿ ಖಾಸಗಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರೆಂದು ತಿಳಿದು ಬಂದಿದೆ. ಅಪಘಾತದಿಂದ ಕೆಲಹೊತ್ತು ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತು.
ಕಾಪು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!