Thursday, October 15, 2026
Homeಕ್ರೈಮ್ಕೋಟೆಕರ್ ಉಲ್ಲಾಳ ಬ್ಯಾಂಕ್ ದರೋಡೆ : ಆರೋಪಿಗಳು ತಪ್ಪಿಸಿಕೊಂಡಿದ್ದಕ್ಕೆ ಸಿಎಂ ಗರಂ : ಹಿರಿಯ ಪೊಲೀಸ್...

ಕೋಟೆಕರ್ ಉಲ್ಲಾಳ ಬ್ಯಾಂಕ್ ದರೋಡೆ : ಆರೋಪಿಗಳು ತಪ್ಪಿಸಿಕೊಂಡಿದ್ದಕ್ಕೆ ಸಿಎಂ ಗರಂ : ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಭೆ

Telegram Group
Join Now

ಮಂಗಳೂರು : ಕೋಟೆಕರ್ ಉಲ್ಲಾಳದ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿದ ಮುಖ್ಯಮಂತ್ರಿಗಳು ಆರೋಪಿಗಳ ಪತ್ತೆಗೆ ಖಡಕ್ ಸೂಚನೆ ನೀಡಿದರು.
ವೈದ್ಯಕೀಯ ಶಿಕ್ಷಣ ಇಲಾಖೆಯ ಕಾರ್ಯಕ್ರಮ ಮುಗಿಯುತ್ತಿದ್ದಂತೆ ಪಶ್ಚಿಮ ರೇಂಜ್‌ನ ಐಜಿ ಅಮಿತ್, ಪೊಲೀಸ್ ಆಯುಕ್ತ ಸಿಂಗ್, ಅನುಪಮ್ ಅಗರವಾಲ್, ಎಸ್.ಪಿ ಯತೀಶ್, ಡಿವೈಎಸ್‌ಪಿ ಸೇರಿ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಘಟನೆಯ ಕುರಿತಂತೆ ಸಮಗ್ರ ಮಾಹಿತಿ ಪಡೆದ ಮುಖ್ಯಮಂತ್ರಿಗಳು, ನೀವೆಲ್ಲಾ ಇದ್ದು ಯಾಕೆ ಹೀಗಾಯ್ತು? ಆರೋಪಿಗಳು ಸಲೀಸಾಗಿ ತಪ್ಪಿಸಿಕೊಂಡು ಹೋಗಿದ್ದು ಹೇಗೆ ? ಎಷ್ಟು ಟೋಲ್‌ಗಳನ್ನು ದಾಟಿ ಹೋಗಿದ್ದಾರೆ. ನೀವು ಟೋಲ್‌ಗಳನ್ನು‌ ಏಕೆ ಟೈಟ್ ಮಾಡಲಿಲ್ಲ ಎಂದು ಗರಂ ಆಗಿ ಪ್ರಶ್ನಿಸಿದರು.
ಸಹಕಾರಿ ಬ್ಯಾಂಕ್‌ನಲ್ಲಿ ಭದ್ರತಾ ಸಿಬ್ಬಂದಿ ಇರಲಿಲ್ಲ. ಐದಾರು ಮಂದಿ ಮಾತ್ರ ಬ್ಯಾಂಕ್ ಸಿಬ್ಬಂದಿ ಇದ್ದರು. ಆರೋಪಿಗಳು ಕನ್ನಡ ಮತ್ತು ಹಿಂದಿಯಲ್ಲಿ ಮಾತಾಡಿರುವುದು ದಾಖಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿದರು.‌
ಎಲ್ಲಾ ಟೋಲ್‌ಗಳಲ್ಲೂ ಬಿಗಿ ತಪಾಸಣೆ ನಡೆಸಬೇಕು. ನಾಲ್ಕು ಜಿಲ್ಲೆಗಳ ವ್ಯಾಪ್ತಿಯಲ್ಲಿ ನಾಕಾಬಂಧಿ ಹಾಕಿ ಆದಷ್ಟು ಬೇಗ ಆರೋಪಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮಕ್ಕೆ ಒಪ್ಪಿಸಿ ಎಂದು ಮುಖ್ಯಮಂತ್ರಿಗಳು ಸೂಚನೆ ನೀಡಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!