Wednesday, August 12, 2026
Homeಕ್ರೈಮ್ಉಡುಪಿ: ಕಾಪು ಪೊಲೀಸ್ ಠಾಣೆಯ ಮಹಿಳಾ ಸಿಬ್ಬಂದಿ ಆತ್ಮಹತ್ಯೆಗೆ ಶರಣು

ಉಡುಪಿ: ಕಾಪು ಪೊಲೀಸ್ ಠಾಣೆಯ ಮಹಿಳಾ ಸಿಬ್ಬಂದಿ ಆತ್ಮಹತ್ಯೆಗೆ ಶರಣು

Telegram Group
Join Now

ಉಡುಪಿ: ಕಾಪು ಪೊಲೀಸ್ ಠಾಣೆಯ ಮಹಿಳಾ ಸಿಬ್ಬಂದಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಕಾಪು ಪೊಲೀಸ್ ಠಾಣೆಯ ಮಹಿಳಾ ಸಿಬ್ಬಂದಿ  ಬಾಗಲಕೋಟೆ ಮೂಲದ ಜ್ಯೋತಿ(29) ಪೊಲೀಸ್ ಕ್ವಾಟ್ರಸ್ ನಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ಘಟನೆ ಇಂದು ಮುಂಜಾನೆ ಬೆಳಕಿಗೆ ಬಂದಿದೆ.

ಜ್ಯೋತಿ ನಿನ್ನೆ ಎಂದಿನಂತೆ ಕರ್ತವ್ಯ ನಿರ್ವಹಿಸಿ ರಾತ್ರಿ ಕ್ವಾಟ್ರಸ್ ಗೆ ತೆರಳಿದ್ದರು.  ಜ್ಯೋತಿ ಇಂದು ಬೆಳಗ್ಗೆ ನೇಣಿಗೆ ಶರಣಾಗಿದ್ದಾರೆ. ಮೃತ ಪೊಲೀಸ್ ಸಿಬ್ಬಂದಿ ಪತಿ ಕೆ.ಎಸ್.ಆರ್.ಟಿ.ಸಿ ಸಿಬ್ಬಂದಿಯಾಗಿದ್ದು ಪತಿ ಬೆಳಿಗ್ಗೆ ಕರ್ತವ್ಯಕ್ಕೆ ಹೋಗಲೆಂದು ಹೊರಟಿದ್ದ ವೇಳೆ ಪತ್ನಿ ಜ್ಯೋತಿ ನೇಣಿಗೆ ಶರಣಾಗಿರೋದು ಗೊತ್ತಾಗಿದೆ. ತಕ್ಷಣ ಪಕ್ಕದಲ್ಲಿರುವ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಇನ್ನು ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಿದ್ಧಲಿಂಗಪ್ಪ, ಡಿವೈಎಸ್ಪಿ ಅರವಿಂದ ಕಲಗುಜ್ಹಿ, ಕಾಪು ತಹಶೀಲ್ದಾರ್ ಪ್ರತಿಭಾ ಆರ್. ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಜ್ಯೋತಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments