Thursday, July 2, 2026
Homeಕ್ರೈಮ್ಲಕ್ಷ್ಮೀ ಹೆಬ್ಬಾಳ್ಕರ್‌ ಕಾರು ಅಪಘಾತ - ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ ಹೇಳಿದ್ದೇನು..?

ಲಕ್ಷ್ಮೀ ಹೆಬ್ಬಾಳ್ಕರ್‌ ಕಾರು ಅಪಘಾತ – ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ ಹೇಳಿದ್ದೇನು..?

Telegram Group
Join Now

ಬೆಳಗಾವಿ : ಇಂದು ಬೆಳಗ್ಗೆ ಬೆಳಗಾವಿ ಜಿಲ್ಲೆ ಕಿತ್ತೂರಿನಲ್ಲಿ ಸಂಭವಿಸಿದ ಅಪಘಾತದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಾಂಗ್ರೆಸ್‌ನ ನಾಯಕರು ಸೇರಿದಂತೆ ವಿವಿಧ ಪಕ್ಷಗಳ ನಾಯಕರು ಹೆಬ್ಬಾಳ್ಕರ್‌ ಅವರ ಆರೋಗ್ಯ ವಿಚಾರಿಸುತ್ತಿದ್ದಾರೆ. ಈ ನಡುವೆ ವಿಧಾನ ಪರಿಷತ್‌ನ ಬಿಜೆಪಿ ಸದಸ್ಯ ಸಿ.ಟಿ. ರವಿ ಕೂಡಾ ಪ್ರತಿಕ್ರಿಯೆ ನೀಡಿದ್ದಾರೆ.
‘ಇಂದು ಬೆಳಗಾವಿಯ ಕಿತ್ತೂರಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಅವರ ಸಹೋದರ ಶೀಘ್ರ ಗುಣಮುಖರಾಗಲಿ ಎಂದು ಶ್ರೀ ದೇವರಲ್ಲಿ ಪ್ರಾರ್ಥಿಸುವೆ’ ಅಂತ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ರವಿ ಅವರ ಈ ಪೋಸ್ಟ್‌ಗೆ ಹಲವು ರೀತಿಯ ಕಾಮೆಂಟ್‌ಗಳನ್ನ ಅವರ ಅಭಿಮಾನಿಗಳು ಹಾಕಿದ್ದಾರೆ.
ಬೆಳಗಾವಿಯಲ್ಲಿ ನಡೆದ ವಿಧಾನಮಂಡಲದ ಚಳಿಗಾಲದ ಅಧಿವೇಶನ ಸಂದರ್ಭದಲ್ಲಿ ನಡೆದ ಘಟನೆಯಿಂದ ಹೆಬ್ಬಾಳ್ಕರ್ ಹಾಗೂ ಸಿ.ಟಿ. ರವಿ ಬಹಳ ಸುದ್ದಿಯಾಗಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments