Wednesday, August 12, 2026
Homeಕ್ರೈಮ್ಉಡುಪಿ: ಮನೆ ಜಗಲಿಯಲ್ಲಿ ಮಲಗಿದ್ದ ವ್ಯಕ್ತಿಯ ಮೇಲೆ ಚಿರತೆ ದಾಳಿ

ಉಡುಪಿ: ಮನೆ ಜಗಲಿಯಲ್ಲಿ ಮಲಗಿದ್ದ ವ್ಯಕ್ತಿಯ ಮೇಲೆ ಚಿರತೆ ದಾಳಿ

Telegram Group
Join Now

ಉಡುಪಿ: ಮನೆಯ ಹೊರಗೆ ಜಗಲಿಯಲ್ಲಿ ಮಲಗಿದ್ದ ವ್ಯಕ್ತಿಯ ಮೇಲೆ ಚಿರತೆ ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿದ ಘಟನೆ ಶಿರ್ವದ ಕಲ್ಲೊಟ್ಟುವಿನಲ್ಲಿ ನಡೆದಿದೆ. ಕಳೆದ ರಾತ್ರಿ ಈ ಘಟನೆ ನಡೆದಿದ್ದು, ಅದೃಷ್ಟವಶಾತ್ ವ್ಯಕ್ತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಿಹಾರ ಮೂಲದ ಕಾರ್ಮಿಕ ಸುರೇಂದ್ರ (55) ದಾಳಿಗೊಳಗಾದ ವ್ಯಕ್ತಿ.

ಘಟನೆಯಿಂದ ಆತಂಕಕ್ಕೊಳಗಾಗಿರುವ ಗ್ರಾಮಸ್ಥರು ಚಿರತೆ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಒತ್ತಾಯಿಸಿದ್ದಾರೆ. ಕಲ್ಲೊಟ್ಟು, ಸೊರ್ಪು ಅಗೋಳಿಬೈಲು ಪರಿಸರದಲ್ಲಿ ಚಿರತೆ ಹಾವಳಿ ಹೆಚ್ಚಾಗಿದ್ದು ಸೂಕ್ತ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಇನ್ನು ಚಿರತೆ ಸೆರೆಗೆ ಬೋನು ಇರಿಸುವ ಬಗ್ಗೆ ಅರಣ್ಯ ಇಲಾಖೆ ಭರವಸೆ ನೀಡಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments