Tuesday, March 31, 2026
Homebig breakingಬಿಹಾರದಂತೆ ಕರ್ನಾಟಕ ದರೋಡೆಕೋರರ ರಾಜ್ಯವಾಗುತ್ತಿದೆ - ವಿಪಕ್ಷ ನಾಯಕ ಆರ್.‌ ಅಶೋಕ್‌

ಬಿಹಾರದಂತೆ ಕರ್ನಾಟಕ ದರೋಡೆಕೋರರ ರಾಜ್ಯವಾಗುತ್ತಿದೆ – ವಿಪಕ್ಷ ನಾಯಕ ಆರ್.‌ ಅಶೋಕ್‌

ಬೆಂಗಳೂರು : ಬಿಹಾರ ರಾಜ್ಯದಂತೆ ಕರ್ನಾಟಕ ಕೂಡಾ ದರೋಡೆಕೋರರ ರಾಜ್ಯವಾಗುತ್ತಿದೆ ಎಂದು ವಿಪಕ್ಷ ನಾಯಕ ಆರ್.‌ ಅಶೋಕ್‌ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಬೀದರ್ ಮತ್ತು ಮಂಗಳೂರಿನಲ್ಲಿ ನಡೆದ ಬ್ಯಾಂಕ್ ಹಣ ದರೋಡೆ ಪ್ರಕರಣ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಬೀದರ್ ನಲ್ಲಿ ಹಾಡುಹಗಲೇ ದರೋಡೆ ನಡೆದಿದೆ. ದರೋಡೆ ಮಾಡಿದವರು ವಿಮಾನ ರೈಲುಗಳಲ್ಲಿ ತೆರಳುತ್ತಿದ್ದಾರೆ. ಪೊಲೀಸರು ಬೀಟ್‌ನಲ್ಲಿ ಇದ್ದರೂ ಕೂಡಾ ಯಾರನ್ನು ಬಂಧಿಸಿಲ್ಲ. ಸಿದ್ದರಾಮಯ್ಯ ಪೊಲೀಸ್ ಅಧಿಕಾರಿಗಳ ಸಭೆ ಮಾಡಿಲ್ಲ. ಪೊಲೀಸರು ರಾಜ್ಯದ ಗೌರವವನ್ನು ಮಣ್ಣು ಪಾಲು ಮಾಡಿದ್ದಾರೆ ಎಂದು ಆಕ್ರೋಶ ಹೊರಹಾಕಿದರು.
ಸರ್ಕಾರದ ಎಲ್ಲರು ಭಿನ್ನರ ಮೀಟಿಂಗ್ ನಡೆಸುವುದರಲ್ಲಿ ನಿರತರಾಗಿದ್ದಾರೆ. ಸಿಎಂ ಸಿದ್ದರಾಮಯ್ಯ ಮತ್ತು ಸಚಿವರು ಡಿನ್ನರ್ ಮೀಟಿಂಗ್‌ನಲ್ಲಿ ಕಾಲಹರಣ ಮಾಡುತ್ತಿದ್ದಾರೆ. ಕುರ್ಚಿ ಉಳಿಸಿಕೊಳ್ಳುವುದೇ ನಾಯಕರ ಟೆನ್ಶನ್‌ ಆಗಿದೆ. ಅದನ್ನು ಬಿಟ್ಟು ಕಾನೂನು ಸುವ್ಯವಸ್ಥೆಯತ್ತ ಗಮನಹರಿಸಿ ಎಂದು ಸಲಹೆ ನೀಡಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!