Tuesday, February 10, 2026
Homeಕ್ರೈಮ್ಮಂಗಳೂರು; ಅತ್ಯಾಚಾರಕ್ಕೊಳಗಾದ ಮಾನಸಿಕ ಅಸ್ವಸ್ಥೆಯ ಮಗು ಮಾರಾಟ ಪ್ರಕರಣ; ವೈದ್ಯ, ಅತ್ಯಾಚಾರದ ಆರೋಪಿ ಸೇರಿ ಮೂವರ...

ಮಂಗಳೂರು; ಅತ್ಯಾಚಾರಕ್ಕೊಳಗಾದ ಮಾನಸಿಕ ಅಸ್ವಸ್ಥೆಯ ಮಗು ಮಾರಾಟ ಪ್ರಕರಣ; ವೈದ್ಯ, ಅತ್ಯಾಚಾರದ ಆರೋಪಿ ಸೇರಿ ಮೂವರ ಬಂಧನ

ಮಂಗಳೂರು; ಅತ್ಯಾಚಾರಕ್ಕೊಳಗಾದ ಮಾನಸಿಕ ಅಸ್ವಸ್ಥೆಯ ಮಗು ಮಾರಾಟ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ವೈದ್ಯ, ಅತ್ಯಾಚಾರದ ಆರೋಪಿ ಸೇರಿ ಮೂವರನ್ನು ಬಂಧಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಬಿ ಸಿ ರೋಡ್‌ನ‌ ವೈದ್ಯ ಡಾ| ಸೋಮೇಶ್‌ ಸೊಲೊಮನ್‌, ಮಂಗಳೂರಿನ ಪಿಜಿ ಮಾಲಕಿ ವಿಜಯಲಕ್ಷ್ಮಿ ಆಲಿಯಾಸ್‌ ವಿಜಯ ಮತ್ತು ಅತ್ಯಾಚಾರ ಆರೋಪಿ ನವನೀತ್‌ ನಾರಾಯಣ ಬಂಧಿತರು.


ಆರೋಪಿಗಳಪ ಮಾರಾಟ ಮಾಡಿದ ಮಗುವನ್ನು ಕಾಪು ತಾಲ್ಲೂಕು ಕಲ್ಲುಗುಡ್ಡೆಯ ನಿವಾಸಿ ಪ್ರಭಾವತಿ– ರಮೇಶ್ ಮೂಲ್ಯ ದಂಪತಿ ಖರೀದಿಸಿದ್ದರು. ಮಗುವನ್ನು ಅಂಗನವಾಡಿಗೆ  ಕರೆದುಕೊಂಡು ಬಂದಿದ್ದರು. ಈ ವೇಳೆ ಅಂಗನವಾಡಿ ಕಾರ್ಯಕರ್ತೆಗೆ ಇದು ಇವರ ಮಗುವಲ್ಲ ಎಂದು ಗೊತ್ತಾಗಿದೆ. ಅವರದಲ್ಲದ ಮಗುವಿನ ಬಗ್ಗೆ ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಮಂಗಳೂರಿನ ಕೊಲಾಸೋ ಆಸ್ಪತ್ರೆಯಲ್ಲಿ ಅವಿವಾಹಿತೆಗೆ  ಹೆರಿಗೆಯಾಗಿದ್ದು, ಹಣ ನೀಡಿ ಆಸ್ಪತ್ರೆಯ ಮೂಲಕ ಮಗುವನ್ನು ಪಡೆದುಕೊಂಡು ಬಂದಿರುವುದಾಗಿ ದಂಪತಿ ಅಂಗನವಾಡಿ ಕಾರ್ಯಕರ್ತೆಗೆ ಮಾಹಿತಿ ನೀಡಿದ್ದಾರೆ . ಈ ಬಗ್ಗೆ ಅಂಗನವಾಡಿ ಕಾರ್ಯಕರ್ತೆಶಿರ್ವ ಪೊಲೀಸ್‌ ಠಾಣೆಗೆ ಮಾಹಿತಿ ನೀಡಿದ್ದು, ಶಿರ್ವಪೊಲೀಸರು ಪ್ರಭಾವತಿಯವರ ಮನೆಗೆ ಭೇಟಿ ನೀಡಿ ವಿಚಾರಿಸಿದಾಗ ಹೆಣ್ಣು ಮಗು ಆಗಸ್ಟ್ 3 ಮಂಗಳೂರಿನ ಕೊಲಾಸೋ ಆಸ್ಪತ್ರೆಯಲ್ಲಿ ಜನಿಸಿದ್ದು, ಮಂಗಳೂರಿನ ಕೊಲಾಸೊ ಆಸ್ಪತ್ರೆಯ ವೈದ್ಯರಿಗೆ ₹4.5 ಲಕ್ಷ ಹಣ ನೀಡಿ ಶಿಶು ಪಡೆದುಕೊಂಡಿದ್ದಾರೆ ಎಂಬ ಮಾಹಿತಿ ಲಭಿಸಿದೆ .


ಮಾನಸಿಕ ಆಸ್ವಸ್ಥೆಯಾಗಿದ್ದ ಮಗುವಿನ ತಾಯಿ ಅತ್ಯಾಚಾರಕ್ಕೆ ಒಳಗಾಗಿದ್ದು, ಆಕೆಯ ಪರಿಚಯದ ನವನೀತ್‌ ನಾರಾಯಣ ಅತ್ಯಾಚಾರ ನಡೆಸಿದ್ದು ಪೊಲೀಸ್‌ ತನಿಖೆಯಿಂದ ತಿಳಿದು ಬಂದಿದೆ. ಈ ಪ್ರಕರಣದಲ್ಲಿ ಒಳಗೊಂಡ ಆರೋಪಿಗಳಾದ  ಬಿಸಿ ರೋಡ್‌ನ‌ ವೈದ್ಯ ಡಾ. ಸೋಮೇಶ್‌ ಸೊಲೊಮನ್‌, ವಿಜಯಲಕ್ಷ್ಮೀ ಅಲಿಯಾಸ್‌ ವಿಜಯ ಮತ್ತು ನವನೀತ್‌ ನಾರಾಯಣ ಅವರನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಿದಾಗ ಅವರು ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ. ಶಿರ್ವಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಕಾರ್ಕಳ ಡಿವೈಎಸ್‌ಪಿ ಡಾ. ಹರ್ಷಾ ಪ್ರಿಯಂವದಾ ಅವರ ನೇತೃತ್ವದಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!