ಹಾಸನ; ಭೀಕರ ಅಪಘಾತಕ್ಕೆ ತಾಯಿ ಮಗ ಬಲಿಯಾಗಿರುವ ಘಟನೆ ಶಿರಾಡಿ ಘಾಟ್ ನಲ್ಲಿ ನಡೆದಿದೆ. ಶಫಿಯಾ ಹಾಗೂ ಅವರ ಮಗ ಶೌಫಿಕ್ ಮೃತ ದುರ್ದೈವಿಗಳು.

ಬೆಂಗಳೂರಿನಿಂದ ಬಂಟ್ವಾಳ ಕಡೆಗೆ ಬರುವ ಇನ್ನೋವಾ ಕಾರು ಹಾಗೂ ಮಂಗಳೂರಿನಿಂದ ಬೆಂಗಳೂರಿಗೆ ಹೋಗುವ ಕಂಟೇನರ್ ನಡುವೆ ಡಿಕ್ಕಿಯಾಗಿದೆ.ಪರಿಣಾಮ ಕಾರಿನಲ್ಲಿದ್ದ ತಾಯಿ ಹಾಗೂ ಮಗ ಸಾವನ್ನಪ್ಪಿದ್ದಾರೆ. ಗಾಯಾಳುಗಳನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.