ಮೂಡಿಗೆರೆ: ಓವರ್ ಟೇಕ್ ಮಾಡುವ ಭರದಲ್ಲಿ ಎರಡು ಕಾರುಗಳ ನಡುವೆ ಡಿಕ್ಕಿಯಾದ ಘಟನೆ ಗೋಣಿಬೀಡು ಆಂಜನೇಯ ದೇವಸ್ಥಾನದ ಬಳಿ ನಡೆದಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.
ಅತಿಯಾದ ವೇಗ ಅಪಘಾತಕ್ಕೆ ಕಾರಣವಾಗಿದೆ ಓವರ್ ಟೇಕ್ ಮಾಡುವ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರೊಂದು ಸಂಪೂರ್ಣ ನಜ್ಜುಗುಜ್ಜಾಗಿದ್ದುಹಾಘೆ ಇನ್ನೊಂದು ಕಾರಿಗೆ ಡಿಕ್ಕಿ ಹೊಡೆದ ರಭಸಕ್ಕೆ ಪಲ್ಟಿ ಹೊಡೆದು ಚರಂಡಿಗೆ ಬಿದ್ದಿದ್ದೆ. ಚಾಲಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಗಾಯಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಗಾಯಳುಗಳು ಬೆಂಗಳೂರು ಮೂಲದವರಾಗಿದ್ದು ಪ್ರವಾಸಕ್ಕೆ ಬಂದಿದ್ದು ಹಾಗೆ ಬೆಂಗಳೂರಿಗೆ ಹಿಂತಿರುಗಿ ಹೋಗುವಾಗ ಈ ಘಟನೆ ಸಂಭವಿಸಿದೆ
ಸ್ಥಳಕ್ಕೆ ಗೋಣಿಬೀಡು ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.