ಬೆಂಗಳೂರು : ಸಂಸದ ಪ್ರಜ್ವಲ್ ರೇವಣ್ಣ ಎಲ್ಲಿ ಇದ್ದಾನೆ ಅನ್ನೋ ಬಗ್ಗೆ ಎಸ್ ಐಟಿಗೆ ಮಾಹಿತಿಯಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ವಿದೇಶದಲ್ಲಿ ತಲೆ ಮರೆಸಿಕೊಂಡಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಇದುವರೆಗೂ ಎಸ್ ಐಟಿ ಮುಂದೆ ವಿಚಾರಣೆಗೆ ಹಾಜರಾಗಿಲ್ಲ.ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್, ಪ್ರಜ್ವಲ್ ಎಲ್ಲಿದ್ದಾನೆ ಎಂಬುದು ಎಸ್‌ಐಟಿಗೆ ಗೊತ್ತಿದೆ ಎಂದಿದ್ದಾರೆ.
ಎಸ್‌ಐಟಿ ತನಿಖೆಯ ವೇಳೆ ನಾವು ಯಾವುದನ್ನು ಹೇಳಲು ಆಗುವುದಿಲ್ಲ ಎಂದು ಅವರು ತಿಳಿಸಿದರು.ಪ್ರಕರಣದ ಹಿಂದೆ ದೊಡ್ಡ ತಿಮಿಂಗಲ ಇದೆ ಎಂದು ಕುಮಾರಸ್ವಾಮಿ ಅವರು ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಹಾಗಾದರೆ ತಿಮಿಂಗಲ ಯಾರು ಅಂತ ಕುಮಾರಸ್ವಾಮಿಗೆ ಗೊತ್ತಿದೆ. ಅದನ್ನು ಹೇಳದೇ ಇರುವುದೇ ದೊಡ್ಡ ತಪ್ಪಲ್ವಾ? ತಿಮಿಂಗಲ ಯಾರು ಅಂತ ಎಚ್ ಡಿ ಕುಮಾರಸ್ವಾಮಿ ಹೇಳಿ ಬಿಡಲಿ. ಪ್ರಜ್ವಲ್ ಎಲ್ಲಿದ್ದಾನೆ ಎಂದು ನಿಮಗೆ ಏನಾದರೂ ಗೊತ್ತಿದೆಯಾ? ಗೊತ್ತಿದ್ದರೆ ಹೇಳಿ ನಮಗೂ ಸ್ವಲ್ಪ ಸಹಾಯ ಆಗುತ್ತದೆ ಎಂದು ತಿರುಗೇಟು ಕೊಟ್ಟಿದ್ದಾರೆ.