Bengaluru; ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ ಯಡಿಯೂರಪ್ಪ ವಿರುದ್ಧ ಪೋಕ್ಸೊ ಕೇಸ್ ದಾಖಲಾಗಿದೆ.
ಕಳೆದ ಫೆಬ್ರವರಿಯಲ್ಲಿ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಅಂತ ಆರೋಪಿಸಿ ಯಡಿಯೂರಪ್ಪ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆಯ ತಾಯಿ ದೂರು ನೀಡಿದ್ದಾಳೆ. ಈ ಹಿನ್ನೆಲೆ ಮಾಜಿ ಸಿಎಂ ವಿರುದ್ಧ ಪೋಕ್ಸೊ ಮತ್ತು 354 (ಎ) ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಫೆಬ್ರವರಿ 2 ರಂದು ಅಪ್ರಾಪ್ತೆಯ ಮೇಲೆ ಈ ಹಿಂದೆ ಆಗಿದ್ದ ಅತ್ಯಾಚಾರದ ಬಗ್ಗೆ ಸಹಾಯ ಯಾಚಿಸಲು ಯಡಿಯೂರಪ್ಪ ಮನೆಗೆ ತೆರಳಿದ್ದಾಗ ಘಟನೆ ನಡೆದಿದೆ ಎಂದು ಆರೋಪಿಸಲಾಗಿದೆ. 9 ನಿಮಿಷಗಳ ಕಾಲ ಮೊದಲು ಮಾತನಾಡಿದ್ದ ಮಾಜಿ ಸಿಎಂ ಯಡಿಯೂರಪ್ಪ ಅನಂತರ ಅಪ್ರಾಪ್ತೆಯನ್ನ ರೂಂ ಒಳಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಅಪ್ರಾಪ್ತೆಯ ಖಾಸಗಿ ಅಂಗಗಳನ್ನ ಮುಟ್ಟಿ ಲೈಂಗಿಕ ದೌರ್ಜನ್ಯವೆಸಗಿದ್ದಾರೆ.

ನಂತರ ರೂಂ ನಿಂದ ಹೊರ ಬಂದು ಯಡಿಯೂರಪ್ಪ ಅವರು ಕ್ಷಮೆಯಾಚಿಸಿದ್ದಾರೆ. ಈ ವಿಚಾರವನ್ನ ಯಾರಿಗೂ ಹೇಳಬಾರದೆಂದು ಹೆದರಿಸಿ ನಮ್ಮನ್ನ ತಡೆದಿದ್ದಾರೆಂದು ಸಂತ್ರಸ್ತೆಯ ತಾಯಿ ದೂರಿನಲ್ಲಿ ಉಲ್ಲೇಖಿಸಿದ್ದಾಳೆ.
ಇನ್ನು ದೂರುದಾರ ಮಹಿಳೆ 2015 ರಿಂದ ದೊಡ್ಡ ದೊಡ್ಡ ಉದ್ಯಮಿಗಳು, ರಾಜಕಾರಣಿಗಳ ಮೇಲೂ ಕೇಸ್ ದಾಖಲಿಸಿದ್ದಾರಂತೆ. ಅಲ್ಲದೇ ತನ್ನ ಗಂಡನ ವಿರುದ್ಧವೂ ಕೇಸ್ ದಾಖಲಿಸಿದ್ದಾಳೆಂದು ತಿಳಿದುಬಂದಿದೆ.
