Saturday, September 26, 2026
Homeಬ್ರೇಕಿಂಗ್ ನ್ಯೂಸ್ಮಾಜಿ ಸಿಎಂ BSY ವಿರುದ್ಧ ಪೋಕ್ಸೊ ಕೇಸ್ ದಾಖಲು..!

ಮಾಜಿ ಸಿಎಂ BSY ವಿರುದ್ಧ ಪೋಕ್ಸೊ ಕೇಸ್ ದಾಖಲು..!

ಮಾಜಿ ಸಿಎಂ BSY ವಿರುದ್ಧ ಪೋಕ್ಸೊ ಕೇಸ್ ದಾಖಲು

Telegram Group
Join Now

Bengaluru; ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ ಯಡಿಯೂರಪ್ಪ ವಿರುದ್ಧ ಪೋಕ್ಸೊ ಕೇಸ್ ದಾಖಲಾಗಿದೆ.

ಕಳೆದ ಫೆಬ್ರವರಿಯಲ್ಲಿ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಅಂತ ಆರೋಪಿಸಿ ಯಡಿಯೂರಪ್ಪ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆಯ ತಾಯಿ ದೂರು ನೀಡಿದ್ದಾಳೆ. ಈ ಹಿನ್ನೆಲೆ ಮಾಜಿ ಸಿಎಂ ವಿರುದ್ಧ ಪೋಕ್ಸೊ ಮತ್ತು 354 (ಎ) ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಫೆಬ್ರವರಿ 2 ರಂದು ಅಪ್ರಾಪ್ತೆಯ ಮೇಲೆ ಈ ಹಿಂದೆ ಆಗಿದ್ದ ಅತ್ಯಾಚಾರದ ಬಗ್ಗೆ ಸಹಾಯ ಯಾಚಿಸಲು ಯಡಿಯೂರಪ್ಪ ಮನೆಗೆ ತೆರಳಿದ್ದಾಗ ಘಟನೆ ನಡೆದಿದೆ ಎಂದು ಆರೋಪಿಸಲಾಗಿದೆ. 9 ನಿಮಿಷಗಳ ಕಾಲ ಮೊದಲು ಮಾತನಾಡಿದ್ದ ಮಾಜಿ ಸಿಎಂ ಯಡಿಯೂರಪ್ಪ ಅನಂತರ ಅಪ್ರಾಪ್ತೆಯನ್ನ ರೂಂ ಒಳಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಅಪ್ರಾಪ್ತೆಯ ಖಾಸಗಿ ಅಂಗಗಳನ್ನ ಮುಟ್ಟಿ ಲೈಂಗಿಕ ದೌರ್ಜನ್ಯವೆಸಗಿದ್ದಾರೆ.

ನಂತರ ರೂಂ ನಿಂದ ಹೊರ ಬಂದು ಯಡಿಯೂರಪ್ಪ ಅವರು ಕ್ಷಮೆಯಾಚಿಸಿದ್ದಾರೆ. ಈ ವಿಚಾರವನ್ನ ಯಾರಿಗೂ ಹೇಳಬಾರದೆಂದು ಹೆದರಿಸಿ ನಮ್ಮನ್ನ ತಡೆದಿದ್ದಾರೆಂದು ಸಂತ್ರಸ್ತೆಯ ತಾಯಿ ದೂರಿನಲ್ಲಿ ಉಲ್ಲೇಖಿಸಿದ್ದಾಳೆ.

ಇನ್ನು ದೂರುದಾರ ಮಹಿಳೆ 2015 ರಿಂದ ದೊಡ್ಡ ದೊಡ್ಡ ಉದ್ಯಮಿಗಳು, ರಾಜಕಾರಣಿಗಳ ಮೇಲೂ ಕೇಸ್ ದಾಖಲಿಸಿದ್ದಾರಂತೆ. ಅಲ್ಲದೇ ತನ್ನ ಗಂಡನ ವಿರುದ್ಧವೂ ಕೇಸ್ ದಾಖಲಿಸಿದ್ದಾಳೆಂದು ತಿಳಿದುಬಂದಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!