ಬೆಂಗಳೂರು: ಹಾಸನ ರಾಸಲೀಲೆ ಪ್ರಕರಣ ಸಂಬಂಧ ಸಂಸದ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ತಮ್ಮ ವಿರುದ್ಧದ ಮೂರು ಅತ್ಯಾಚಾರ ಆರೋಪದ ಕೇಸ್‌ನಲ್ಲಿಯೂ ಸಿಐಡಿ ಕ್ರೈಂ ನಂ 20ರಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.

ವಕೀಲ ಅರುಣ್ ಅವರ ಮೂಲಕ ಇಂದು ಮಧ್ಯಾಹ್ನ ಜನಪ್ರತಿನಿಧಿಗಳ ಕೋರ್ಟ್‍ಗೆ ಪ್ರಜ್ವಲ್ ಅರ್ಜಿ ಸಲ್ಲಿಸಿದ್ದಾರೆ. ಇನ್ನು ಈ ಬಗ್ಗೆ ಆಕ್ಷೇಪಣೆ ಸಲ್ಲಿಸಲು ಎಸ್ಐಟಿ ಗೆ ಸೂಚನೆ ನೀಡಲಾಗಿದೆ. ನಾಳೆ ವಿಚಾರಣೆ ನಡೆಸುವಂತೆ ಪ್ರಜ್ವಲ್ ಪರ ವಕೀಲರು ಮನವಿ ಮಾಡಿದ್ದಾರೆ. ಮಧ್ಯಂತರ ಜಾಮೀನು ನೀಡುವಂತೆ ಮಾಡಿದ್ದ ಮನವಿಯನ್ನು ಕೋರ್ಟ್ ತಿರಸ್ಕರಿಸಿದ್ದು, ವಿಚಾರಣೆ ಮುಂದೂಡಲಾಗಿದೆ. ಮಧ್ಯಂತರ ಜಾಮೀನು ಅರ್ಜಿ ಮನವಿ ಬಗ್ಗೆ ಬಗ್ಗೆ ಮೇ.31 ರಂದು ವಿಚಾರಣೆ ನಡೆಸುವುದಾಗಿ ಕೋರ್ಟ್ ಹೇಳಿದೆ.