Thursday, October 15, 2026
Homeಕ್ರೈಮ್ಅಪ್ರಾಪ್ತೆ ಮೇಲೆ ಅತ್ಯಾಚಾರ - ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

ಅಪ್ರಾಪ್ತೆ ಮೇಲೆ ಅತ್ಯಾಚಾರ – ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

Telegram Group
Join Now

ಮಡಿಕೇರಿ : ಅತ್ಯಾಚಾರ ಪ್ರಕರಣದ ಆರೋಪಿಗೆ ಮಡಿಕೇರಿ 3ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು ಐದು ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.
ಸುಂಟಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಹರದೂರು ಗ್ರಾಮದ ಮುತ್ತಿನತೋಟ ಎಸ್ಟೇಟ್‌ನ ಲೈನ್ ಮನೆಯಲ್ಲಿ ವಾಸವಿರುವ ಎಂ.ವಿ. ರಮೇಶ ಎಂಬಾತನೇ ಅತ್ಯಾಚಾರದ ಆರೋಪದಡಿಯಲ್ಲಿ ಶಿಕ್ಷೆಗೆ ಒಳಗಾದ ವ್ಯಕ್ತಿ. ಈತ 2021ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ. ಸಂತ್ರಸ್ತೆ ಪೋಷಕರು ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಬಳಿಕ ಪೊಲೀಸರು ರಮೇಶನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.
ಪ್ರಕರಣದ ಸಂಪೂರ್ಣ ತನಿಖೆ ಕೈಗೊಂಡ ತನಿಖಾಧಿಕಾರಿಗಳಾದ ಕುಶಾಲನಗರ ವೃತ್ತ ನಿರೀಕ್ಷಕ ಎಂ. ಮಹೇಶ್ ಮತ್ತು ಸಿಬ್ಬಂದಿ ಆರೋಪಿಯ ವಿರುದ್ಧ ಸೂಕ್ತ ಸಾಕ್ಷ್ಯಾಧಾರಗಳನ್ನು ಕಲೆ ಹಾಕಿ 2021ರಲ್ಲಿ ಮಡಿಕೇರಿಯ 3ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು.
ನ್ಯಾಯಾಧೀಶರಾದ ಸಿ.ಕೆ. ಬಸವರಾಜು ಅವರು ಪ್ರಕರಣದ ವಿಚಾರಣೆ ನಡೆಸಿ, ಆರೋಪಿ ರಮೇಶನಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ರೂ. ಐದು ಸಾವಿರ ದಂಡ ಹಾಗೂ ದಂಡದ ಮೊತ್ತವನ್ನು ಪಾವತಿಸದಿದ್ದಲ್ಲಿ 3 ತಿಂಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಸರ್ಕಾರಿ ಅಭಿಯೋಜಕ ಬಿ.ಎಸ್. ರುದ್ರಪ್ರಸನ್ನ ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!