ಬೆಂಗಳೂರು : ಹಾಸನ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ತಲೆಮರೆಸಿಕೊಂಡಿರುವ ಸಂಸದ ಪ್ರಜ್ವಲ್ ರೇವಣ್ಣ ಪತ್ತೆಗೆ ರೆಡ್ ಕಾರ್ನರ್ ನೋಟಿಸ್ ಜಾರಿಗೆ ಎಸ್ ಐಟಿ ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ.
ಪ್ರಜ್ವಲ್ ರೇವಣ್ಣ ವಿರುದ್ಧ ಈಗಾಗಲೇ ಬ್ಲೂ ಕಾರ್ನರ್ ನೋಟಿಸ್ ಜಾರಿ ಮಾಡಲಾಗಿದ್ದು, ಪ್ರಜ್ವಲ್ ರೇವಣ್ಣ ಸುಳಿವು ದೊರೆತಿಲ್ಲ. ರೆಡ್ ಕಾರ್ನರ್ ಸಂಬಂಧ ಎಸ್ ಐಟಿ ಅಧಿಕಾರಿಗಳು ಸಿಬಿಐ ಅಧಿಕರಿಗಳ ಜೊತೆಗೆ ಚರ್ಚಿಸಿದ್ದು, ರೆಡ್ ಕಾರ್ನರ್ ನೋಟಿಸ್ ಜಾರಿಯಾದ್ರೆ ಆರೋಪಿ ತಲೆಮರೆಸಿಕೊಂಡಿರುವ ದೇಶದ ಪೊಲೀಸರು, ಆರೋಪಿಯನ್ನು ಪತ್ತೆ ಹಚ್ಚಿ ವಶಕ್ಕೆ ಪಡೆಯಲಿದ್ದಾರೆ. ನಂತರ ರೆಡ್ ಕಾರ್ನರ್ ಜಾರಿ ಮಾಡಿದ ದೇಶಕ್ಕೆ ಆರೋಪಿಯನ್ನು ಹಸ್ತಾಂತರಿಸಲಿದ್ದಾರೆ.
ಇನ್ನು ಎಸ್ ಐಟಿ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದ ವೇಳೆ ಶಾಸಕ ರೇವಣ್ಣ ಅವರು ಸಂಸದ ಪ್ರಜ್ವಲ್ ರೇವಣ್ಣ ಕರೆದಾಗ ವಿಚಾರಣೆಗೆ ಹಾಜರಾಗುತ್ತಾರೆ ಎಂದಿದ್ದರು. ಅಲ್ಲದೇ ಪ್ರಜ್ವಲ್ ರೇವಣ್ಣ ಪರವಾದ ವಕೀಲರು ಕೂಡ ಕಾಲವಕಾಶ ಕೇಳಿ ಎಸ್ ಐಟಿ ಗೆ ಮನವಿ ಸಲ್ಲಿಸಿದ್ದರು. ಅಲ್ಲದೇ ಪ್ರಜ್ವಲ್ ರೇವಣ್ಣ ಕೂಡ ಸತ್ಯ ಆದಷ್ಟು ಬೇಗ ಹೊರ ಬರಲಿದೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದರು. ಹಾಗಾಗಿ ಪ್ರಜ್ವಲ್ ಎಸ್ ಐಟಿ ಮುಂದೆ ಹಾಜರಾಗ್ತಾರೆ ಎಂದು ಎಲ್ಲರೂ ಅಂದುಕೊಂಡಿದ್ದರು. ಆದರೆ ಇದುವರೆಗೂ ಅವರ ಸುಳಿವಿಲ್ಲ. ಇದೀಗ ಎಸ್ ಐಟಿ ಅಧಿಕಾರಿಗಳು ರೆಡ್ ಕಾರ್ನರ್ ನೋಟಿಸ್ ನೀಡಲು ಸಿದ್ಧತೆ ನಡೆಸುತ್ತಿದ್ದಾರೆ.