Tuesday, August 11, 2026
Homeಕ್ರೈಮ್ರೇಣುಕಾಸ್ವಾಮಿ ಕೊಲೆ ಪ್ರಕರಣ: ಇಂದು ಪೊಲೀಸರು ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಕೆ ಸಾಧ್ಯತೆ

ರೇಣುಕಾಸ್ವಾಮಿ ಕೊಲೆ ಪ್ರಕರಣ: ಇಂದು ಪೊಲೀಸರು ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಕೆ ಸಾಧ್ಯತೆ

Telegram Group
Join Now

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಪೊಲೀಸರು ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಕೆ ಸಾಧ್ಯತೆ ಇದೆ ಎನ್ನಲಾಗಿದೆ.

ಪ್ರಕರಣದ ಎಲ್ಲಾ 17 ಆರೋಪಿಗಳ ವಿರುದ್ಧ ಇದೀಗ ಪೊಲೀಸರು 4500 ಪುಟಗಳಷ್ಟು ಚಾರ್ಜ್‌ಶೀಟ್ ಸಲ್ಲಿಸಲು ಸಿದ್ಧತೆ ಮಾಡಿಕೊಂಡಿದ್ದು ಇಂದು ದೋಷಾರೋಪಣೆ ಪಟ್ಟಿ ಸಲ್ಲಿಸುವ ಸಾಧ್ಯತೆ ಇದೆ ಎಂದು ಗೃಹ ಸಚಿವ ಡಾ.ಪರಮೇಶ್ವರ್ ಮಾಹಿತಿ ನೀಡಿದ್ದಾರೆ.

 ಪ್ರಕರಣ ದಾಖಲಾಗಿ 90 ದಿನದೊಳಗೆ ಚಾರ್ಜ್ ಶೀಟ್ ಸಲ್ಲಿಸಬೇಕು. ಹೀಗಾಗಿ ಇಂದು ಚಾರ್ಜ್ ಶೀಟ್ ಸಲ್ಲಿಸಲಾಗುವುದು, ದರ್ಶನ್ ರನ್ನು ಎ 1 ಆರೋಪಿ ಮಾಡುವ ವಿಚಾರ ತನಿಖಾಧಿಕಾರಿಗಳಿಗೆ ಬಿಟ್ಟಿದ್ದು, ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುವ ನಿರೀಕ್ಷೆಯಿದೆ. ದರ್ಶನ್ ಪ್ರಕರಣದಲ್ಲಿ ಸರ್ಕಾರ ಮಧ್ಯ ಪ್ರವೇಶಿಸಲ್ಲ ಎಂದು ಪರಮೇಶ್ವರ್ ತಿಳಿಸಿದ್ದಾರೆ.

ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಇದೆ ಸೆಪ್ಟೆಂಬರ್ 9 ಕ್ಕೆ 3 ತಿಂಗಳು ತುಂಬಲಿವೆ. ಈಗಾಗಲೇ 4500 ಪುಟಗಳ ಚಾರ್ಜ್‌ಶೀಟ್ ಮುಕ್ತಾಯಗೊಂಡಿದ್ದು, ಇಂದು ಸಲ್ಲಿಕೆ ಮಾಡುವ ಸಾಧ್ಯತೆ ದಟ್ಟವಾಗಿದೆ. ಅಪರಾಧಿಗಳಿಗೆ ತಪ್ಪಿಸಿಕೊಳ್ಳಲು ಅವಕಾಶವಾಗಬಾರದೆಂದು ಕಾನೂನು ತಜ್ಞರ ಸಲಹೆಯನ್ನೂ ಪಡೆಯಲಾಗಿದೆ. ಎರಡ್ಮೂರು ಬಾರಿ ಪರಿಶೀಲನೆಯನ್ನೂ ನಡೆಸಲಾಗಿದೆ. 200 ಕ್ಕೂ ಅಧಿಕ ಸಾಕ್ಷಿಗಳ ಹೇಳಿಕೆಗಳನ್ನು ಉಲ್ಲೇಖಿಸಲಾಗಿದೆ.

ಪ್ರಕರಣ ದಾಖಲಾದ ಬಳಿಕ 90 ದಿನಗಳ ಒಳಗಾಗಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸುವುದು ನಿಯಮ. ಹಾಗಾಗಿ ಸೆಪ್ಟೆಂಬರ್ 9ಕ್ಕೆ 3 ತಿಂಗಳು ಅಂದರೆ ಸಂಪೂರ್ಣವಾಗಿ 90 ದಿನಗಳು ಮುಗಿಯಲಿವೆ. ಹಾಗಾಗಿ 200 ಕ್ಕೂ ಅಧಿಕ ಸಾಕ್ಷಿಗಳ ಹೇಳಿಕೆಗಳನ್ನು ಉಲ್ಲೇಖಿಸಲಾಗಿದೆ. ಈಗಾಗಲೇ ಕಾನೂನು ತಜ್ಞರಿಂದ ಪೊಲೀಸ್ ಇಲಾಖೆ ಸಲಹೆಯನ್ನೂ ಪಡೆದಿದೆ. ಎರಡ್ಮೂರು ಬಾರಿ ಪರಿಶೀಲನೆಯನ್ನೂ ಮಾಡಲಾಗಿದೆ. ಅಪರಾಧಿಗಳು ಯಾವುದೇ ಕಾರಣಕ್ಕೂ ತಪ್ಪಿಸಿಕೊಳ್ಳಬಾರದು ಎಂದು ಖಾಕಿ ಪಡೆ ಭಾರೀ ಎಚ್ಚರಿಕೆ ವಹಿಸಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments