Monday, August 4, 2025
!-- afp header code starts here -->
Homeಕ್ರೈಮ್ರೇವಣ್ಣ ಜಾಮೀನು ಅರ್ಜಿ ನಾಳೆಗೆ ಮುಂದೂಡಿಕೆ : ಎಸ್ಐಟಿಗೆ ನೋಟೀಸ್ 

ರೇವಣ್ಣ ಜಾಮೀನು ಅರ್ಜಿ ನಾಳೆಗೆ ಮುಂದೂಡಿಕೆ : ಎಸ್ಐಟಿಗೆ ನೋಟೀಸ್ 

ಬೆಂಗಳೂರು: ಕೆ.ರ್. ನಗರದ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್ಐಟಿ ವಶದಲ್ಲಿರುವ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಜಾಮೀನು ಅರ್ಜಿಯ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬುಧವಾರಕ್ಕೆ ಮುಂದೂಡಿದೆ .ನಾಳೆ (ಮೇ 8 ಕ್ಕೆ ) ಜಾಮೀನು ಅರ್ಜಿಯ ವಿಚಾರಣೆ ನಡೆಸಲಿದೆ .

ಆರೋಪಿ ವಿಚಾರಣೆಗೆ ಪೊಲೀಸ್ ಕಸ್ಟಡಿಯಲ್ಲಿರುವಾಗ ಜಾಮೀನು ಅರ್ಜಿಯ ವಿಚಾರಣೆ ಮಾಡಬಹುದೇ? ಈ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ಅರ್ಜಿ ಸಲ್ಲಿಸುವಂತೆ ಎಸ್ಐಟಿ ಗೆ ನ್ಯಾಯಾಲಯ ನೋಟೀಸ್ ಜಾರಿ ಮಾಡಿದೆ. ಎಚ್.ಡಿ ರೇವಣ್ಣ ಪರ, ಹೈಕೋರ್ಟ್ ನ ಹಿರಿಯ ವಕೀಲರಾದ ಸಿ.ವಿ. ನಾಗೇಶ್ ವಾದ ಮಂಡಿಸಿದ್ದು ,ಈ ಕೇಸ್ನಲ್ಲಿ ತಮ್ಮ ಕಕ್ಷಿದಾದರನ್ನು ಸಿಲುಕಿಸಲಾಗಿದೆ ಎಂದು ಹೇಳಿ, ಅವರಿಗೆ ಜಾಮೀನು ನೀಡಬೇಕು ಅಂತ ನ್ಯಾಯಾಲಯದಲ್ಲಿ ವಾದ ಮಂಡಿಸಿದರು. ಆದರೆ ಇದಕ್ಕೆ ಮಧ್ಯಪ್ರವೇಶಿದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್, ಆರೋಪಿ ಪೊಲೀಸ್ ಕಸ್ಟಡಿಯಲ್ಲಿರುವಾಗ ಜಾಮೀನು ಅರ್ಜಿ ವಿಚಾರಣೆ ಮಾಡಲು ಹೇಗೆ ಸಾಧ್ಯ? ಎಂದು ಪ್ರಶ್ನಿಸಿದ್ದಾರೆ .

ಅಲ್ಲದೆ ಆರೋಪಿಗೆ  ಜಾಮೀನು ನೀಡಿದರೆ ಪೊಲೀಸ್ ಕಸ್ಟಡಿಯನ್ನು ಹೇಗೆ ಮುಂದುವರಿಸಲು ಸಾಧ್ಯ ಎಂದು ಪ್ರಶ್ನೆ ಮಾಡಿದರು.ಇದಕ್ಕೆ ವಾದ ಮಂಡಿಸಿದ ಸಿ.ವಿ. ನಾಗೇಶ್, ಪೊಲೀಸ್ ಕಸ್ಟಡಿಯಲ್ಲಿ ಇದ್ದಾಗಲೂ ಜಾಮೀನು ನೀಡಬಹುದು ಎಂದು ಕಾನೂನಿನ ಅಂಶಗಳು ಹಾಗು ಸುಪ್ರೀಂ ಕೋರ್ಟ್ ನ ಕೆಲವು ತೀರ್ಪಿನ ನಿದರ್ಶನಗಳನ್ನ ನ್ಯಾಯಾಲಯದ ಗಮನಕ್ಕೆತಂದಿದ್ದಾರೆ. ಆದರೆ  ಇದಕ್ಕೆ ಎಸ್‌ಐಟಿ ಆಕ್ಷೇಪ ವ್ಯಕ್ತಪಡಿಸಿತು. ಹೀಗಾಗಿ ರೇವಣ್ಣ ಜಾಮೀನು ಅರ್ಜಿಯ ವಿಚಾರಣೆಯನ್ನು ನಾಳೆಗೆ ಮುಂದೂಡಿಕೆ ಮಾಡಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!