Wednesday, September 23, 2026
Homeಕ್ರೈಮ್ಸ್ಯಾಂಡಲ್‌ವುಡ್‌ನ ಖ್ಯಾತ ನಟಿಗೆ ಮೂರು ತಿಂಗಳು ಜೈಲು ಶಿಕ್ಷೆ, ₹ 40.20 ಲಕ್ಷ ದಂಡ..!

ಸ್ಯಾಂಡಲ್‌ವುಡ್‌ನ ಖ್ಯಾತ ನಟಿಗೆ ಮೂರು ತಿಂಗಳು ಜೈಲು ಶಿಕ್ಷೆ, ₹ 40.20 ಲಕ್ಷ ದಂಡ..!

Telegram Group
Join Now

ಮಂಗಳೂರು: ಚೆಕ್ ಬೌನ್ಸ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸ್ಯಾಂಡಲ್‌ವುಡ್‌ ನಟಿ ಪದ್ಮಜಾ ರಾವ್‌ ಅವರಿಗೆ ಇಲ್ಲಿನ 8ನೇ ಜೆಎಂಎಫ್‌ಸಿ ನ್ಯಾಯಾಲಯ ಮೂರು ತಿಂಗಳು ಸಾದಾ ಕಾರಾಗೃಹ ಶಿಕ್ಷೆ ಹಾಗೂ ₹ 40.20 ಲಕ್ಷ ದಂಡ ವಿಧಿಸಿದೆ.

ವ್ಯಕ್ತಿಯೊಬ್ಬರಿಂದ ಪದ್ಮಜಾ ರಾವ್‌ ₹40 ಲಕ್ಷ ಕೈ ಸಾಲ ಪಡೆದಿದ್ದರು. ಭದ್ರತೆಯಾಗಿ 2020ರ ಜೂನ್‌ 17ರಂದು ಐಸಿಐಸಿಐ ಬ್ಯಾಂಕ್‌ನ ತಮ್ಮ ಖಾತೆಗೆ ಸಂಬಂಧಿಸಿದ ಚೆಕ್‌ ನೀಡಿದ್ದರು. ಈ ಚೆಕ್‌ ಅನ್ನು ನಗದೀಕರಿಸಲು ಹಾಕಿದಾಗ, ಪದ್ಮಜಾ ರಾವ್ ಅವರ ಖಾತೆಯಲ್ಲಿ ಅಷ್ಟೊಂದು ಮೊತ್ತ ಇರಲಿಲ್ಲ. 15 ದಿನದೊಳಗೆ ಸಾಲ ಹಣ ಪಾವತಿಸುವಂತೆ ‌2020ರ ಜೂನ್ 30ರಂದು ಪದ್ಮಜಾ ರಾವ್‌ ಅವರಿಗೆ ನೋಟಿಸ್‌ ನೀಡಿದರೂ ಅವರು ಹಣ ಪಾವತಿಸಿರಲಿಲ್. ಹೀಗಾಗಿ ಮಂಗಳೂರು ಮೇರಿಹಿಲ್ ನಿವಾಸಿ ವೀರೇಂದ್ರ ಶೆಟ್ಟಿ ನ್ಯಾಯಾಲಯದ ಮೊರೆ ಹೋಗಿದ್ದರು.
ಸಮನ್ಸ್‌ ಜಾರಿ ಬಳಿಕ ನ್ಯಾಯಾಲಯಕ್ಕೆ ಹಾಜರಾಗಿದ್ದ ಪದ್ಮಜಾ, ನಾನು ದೂರುದಾರರಿಂದ ಯಾವುದೇ ಸಾಲ ಪಡೆದಿಲ್ಲ ಹಾಗೂ ಅವರಿಗೆ ಯಾವುದೇ ಚೆಕ್‌ ನೀಡಿಲ್ಲ ಎಂದು ಹೇಳಿದ್ದರು.

ಇದಕ್ಕೆ ಪ್ರತಿಯಾಗಿ ವೀರೇಂದ್ರ ಶೆಟ್ಟಿ ವಿರುದ್ಧ ಬೆಂಗಳೂರಿನ ಜೆ.ಪಿ.ನಗರ ಪೊಲೀಸ್ ಠಾಣೆಯಲ್ಲಿ ಪದ್ಮಜಾ ರಾವ್‌ ದೂರು ದಾಖಲಿಸಿದ್ದರು. ಅವರ ಮನೆಯಿಂದ ಚೆಕ್‌ ಕಳವು ಮಾಡಿ ಸಹಿಯನ್ನು ಫೋರ್ಜರಿ ಮಾಡಲಾಗಿದೆ’ ಎಂದು ಪದ್ಮಜಾ ರಾವ್‌ ಪರ ವಕೀಲರು ವಾದಿಸಿದ್ದರು. ಆದರೆ, ಇದಕ್ಕೆ ಪೂರಕ ಪುರಾವೆಗಳನ್ನು ಒದಗಿಸುವಲ್ಲಿ ಅವರು ವಿಫಲರಾಗಿದ್ದರು.

ವಿಚಾರಣೆ ನಡೆಸಿದ 8ನೇ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶ ಫವಾಜ್‌ ಪಿ.ಎ ಅವರು, ‘ಪದ್ಮಜಾ ರಾವ್‌ ಅವರು ₹ 40.20 ಲಕ್ಷ ದಂಡ ಪಾವತಿಸಬೇಕು. ಅದರಲ್ಲಿ ₹ 40.17 ಲಕ್ಷವನ್ನು ದೂರುದಾರರಿಗೆ ನೀಡಬೇಕು. ಹಾಗೂ ₹ 3 ಸಾವಿರವನ್ನು ಸರ್ಕಾರಕ್ಕೆ ಪಾವತಿಸಬೇಕು’ ಎಂದು ತೀರ್ಪು ನೀಡಿದ್ದಾರೆ. ಜತೆಗೆ 3 ತಿಂಗಳು ಜೈಲು ಶಿಕ್ಷೆಗೆ ಆದೇಶಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!