ಬೆಂಗಳೂರು: ಮನೆಗೆಲಸದಾಕೆ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಹಿನ್ನೆಲೆ ಹೆಚ್.ಡಿ.ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಲಾಗಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಚಾರಣೆಯನ್ನು ನಾಳೆಗೆ (ಶುಕ್ರವಾರ) ಮುಂದೂಡಿದೆ.
ಬಂಧನದ ಭೀತಿಯಿಂದ ಇಂದು ಮಧ್ಯಾಹ್ನ ಹೆಚ್.ಡಿ.ರೇವಣ್ಣ ವಕೀಲರ ಮೂಲಕ ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ ಮೆಟ್ಟಿಲೇರಿದ್ರು. ಇದೀಗ ಕೋರ್ಟ್ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನಾಳೆಗೆ ಮುಂದೂಡಿದೆ.
ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ರಾಸಲೀಲೆ ವಿಡಿಯೋ ಪ್ರಕರಣದಲ್ಲಿ ಹೆಚ್.ಡಿ.ರೇವಣ್ಣ ಎ1 ಆರೋಪಿಯಾಗಿದ್ದಾರೆ. ಪ್ರಕರಣ ಸಂಬಂಧ ಎಸ್‌ಐಟಿ ತನಿಖೆ ಚುರುಕುಗೊಳಿಸಿದೆ. ವಿಚಾರಣೆಗೆ ಹಾಜರಾಗುವಂತೆ ಅಪ್ಪ ಮಗ ಇಬ್ಬರಿಗೂ ಎಸ್‌ಐಟಿ ನೊಟೀಸ್ ನೀಡಿದೆ. ಈ ಬೆನ್ನಲ್ಲೇ ರೇವಣ್ಣ ಕೋರ್ಟ್ ಮೊರೆ ಹೋಗಿರೋದು ಕುತೂಹಲ ಮೂಡಿಸಿದೆ.