Saturday, August 15, 2026
Homeಕ್ರೈಮ್ಶಿವಮೊಗ್ಗ: ಹಳೆ ದ್ವೇಷದ ಹಿನ್ನೆಲೆ: ಮಾರಕಾಸ್ತ್ರದಿಂದ ಕೊಚ್ಚಿ ಮಹಿಳೆಯ ಭೀಕರ ಕೊಲೆ!

ಶಿವಮೊಗ್ಗ: ಹಳೆ ದ್ವೇಷದ ಹಿನ್ನೆಲೆ: ಮಾರಕಾಸ್ತ್ರದಿಂದ ಕೊಚ್ಚಿ ಮಹಿಳೆಯ ಭೀಕರ ಕೊಲೆ!

Telegram Group
Join Now

ಶಿವಮೊಗ್ಗ: ಮಾರಕಾಸ್ತ್ರದಿಂದ ಕೊಚ್ಚಿ ಮಹಿಳೆಯ ಭೀಕರ ಹತ್ಯೆ ಮಾಡಲಾಗಿದೆ. ಶಿವಮೊಗ್ಗ ತಾಲೂಕು ದುಮ್ಮಳ್ಳಿಯ ಸಿದ್ದೇಶ್ವರ ನಗರದಲ್ಲಿ ಕಳೆದ ರಾತ್ರಿ ಘಟನೆ ಸಂಭವಿಸಿದೆ. ಗಂಗಮ್ಮ (45) ಕೊಲೆಯಾದ ಮಹಿಳೆ.

ಹಳೆ ದ್ವೇಷದ ಹಿನ್ನೆಲೆ ಗಂಗಮ್ಮ ಅವರ ಹತ್ಯೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಘಟನೆ ಸಂಬಂಧ ನಾಗೇಶ ನಾಯ್ಕ್‌ ಮತ್ತು ಹರೀಶ್‌ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಗಂಗಮ್ಮ ಅವರ ಮೃತದೇಹವನ್ನು ಮೆಗ್ಗಾನ್‌ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ತುಂಗಾ ನಗರ ಪೊಲೀಸ್‌ ಠಾಣೆಯಲ್ಲಿ  ಪ್ರಕರಣ ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments