Friday, March 27, 2026
Homebig breakingಉಳಿದಿರುವ ಒಬ್ಬ ನಕ್ಸಲ್‌ ಶರಣಾಗತಿ ಯಾವಾಗ..? - ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

ಉಳಿದಿರುವ ಒಬ್ಬ ನಕ್ಸಲ್‌ ಶರಣಾಗತಿ ಯಾವಾಗ..? – ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

ಮೈಸೂರು(ಜ.10) : ನಕ್ಸಲಿಸಂ ಅನ್ನು ಸಂಪೂರ್ಣ ತೊಡೆದುಹಾಕವುದು ಕಾಂಗ್ರೆಸ್ ಸರ್ಕಾರದ ಉದ್ದೇಶ. ಯಾವುದೇ ಹೋರಾಟಗಳಾಗಲಿ ಶಾಂತಿಯುತವಾಗಿರಬೇಕೇ ಹೊರತು ಹಿಂಸಾತ್ಮಕ ದಾರಿ ಹಿಡಿಯಬಾರದೆಂಬುದು ಸರ್ಕಾರದ ನಿಲುವು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಶರಣಾಗತರಾದ ನಕ್ಸಲರ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳುವ ಬಗ್ಗೆ ಹಾಗೂ ನಕ್ಸಲರ ಶರಣಾಗತಿಯ ಬಗ್ಗೆ ಪರವಿರೋಧ ಅಭಿಪ್ರಾಯಗಳು ವ್ಯಕ್ತವಾಗುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ನಕ್ಸಲರು ಶರಣಾಗಿದ್ದು, ಅವರ ಶಸ್ತ್ರಾಸ್ತ್ರಗಳನ್ನೂ ಮಹಜರು ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಹೋರಾಟಗಳು ಸಂವಿಧಾನತ್ಮಕ ರೀತಿಯಲ್ಲಿ ನಡೆಯಬೇಕೆಂದು ಡಾ.ಅಂಬೇಡ್ಕರ್ ಹೇಳಿದ್ದಾರೆ. ಅನ್ಯಾಯದ ವಿರುದ್ಧ ಧ್ವನಿಎತ್ತಲು ಸಂವಿಧಾನದಲ್ಲಿ ಅವಕಾಶವಿದ್ದರೂ, ಕಾನೂನನ್ನು ಕೈಗೆ ತೆಗೆದುಕೊಳ್ಳುವ ಅವಕಾಶ ಯಾರಿಗೂ ನೀಡಲಾಗಿಲ್ಲ. ಶೃಂಗೇರಿಯಲ್ಲಿ ಮತ್ತೊಬ್ಬ ನಕ್ಸಲ್ ಇರುವ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ. ಆದರೂ ಅವರೂ ಕೂಡ ಕಾನೂನಿಗೆ ಶರಣಾಗಿ ಮುಖ್ಯವಾಹಿನಿಗೆ ಬರುವಂತಾಗಲಿ ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!