ಚಿಕ್ಕಮಗಳೂರು: ಕೆರೆಯಲ್ಲಿ ಈಜಲು ಹೋಗಿ ಬಾಲಕ ಓರ್ವ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಿನ ಕುಂಬಾರದ ಕಟ್ಟೆ ಕೆರೆಯಲ್ಲಿ ನಡೆದಿದೆ.
ಹೌದು..ಚಿಕ್ಕಮಗಳೂರು ತಾಲೂಕಿನ ಬ್ಯಾಗಡೇಹಳ್ಳಿ ಗ್ರಾಮದ ರಂಜಿತ್ (15) ಮೃತ ದುರ್ದೈವಿಯಾಗಿದ್ದು. ಮಳೆಯ ಕಾರಣ ಜಿಲ್ಲಾಡಳಿತ ಶಾಲೆಗಳಿಗೆ ರಜೆ ನೀಡಿದ್ದು ಆದರೂ ಮಳೆಯ ನಡುವೆ ಬಾಲಕ ಉಪ್ಪಳ್ಳಿ ಸಮೀಪದ ಕುಂಬಾರಕಟ್ಟೆ ಕೆರೆಯಲ್ಲಿ ಈಜಲು ಹೋಗಿ ಮುಳುಗಿ ಸಾವನ್ನಪ್ಪಿದ್ದಾನೆ.
ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರಿಂದ ಮೃತದೇಹ ಮೇಲೆತ್ತಿದ್ದು, ಬಸವನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳದಲ್ಲಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.