Tuesday, August 18, 2026
Homeಜಿಲ್ಲಾಸುದ್ದಿಚಿಕ್ಕಮಗಳೂರಲ್ಲಿ ಪ್ರಸಿದ್ಧ ಬೇಕರಿಯಲ್ಲಿ ಅವಧಿ ಮುಗಿದ ಸಾಸ್ ಹಾಕಿ ಕೇಕ್‌ ಮಾರಾಟ: ಗ್ರಾಹಕನಿಂದ ಹಿಗ್ಗಾಮುಗ್ಗಾ ತರಾಟೆ!

ಚಿಕ್ಕಮಗಳೂರಲ್ಲಿ ಪ್ರಸಿದ್ಧ ಬೇಕರಿಯಲ್ಲಿ ಅವಧಿ ಮುಗಿದ ಸಾಸ್ ಹಾಕಿ ಕೇಕ್‌ ಮಾರಾಟ: ಗ್ರಾಹಕನಿಂದ ಹಿಗ್ಗಾಮುಗ್ಗಾ ತರಾಟೆ!

Telegram Group
Join Now

ಚಿಕ್ಕಮಗಳೂರು: ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ಹೋಟೆಲ್‌ ಹಾಗೂ ಬೇಕರಿಗಳ ಮೇಲೆ ಕ್ಷಿಪ್ರ ಕಾರ್ಯಾಚರಣೆ ನಡೆಸುತ್ತಿರುವ ಬೆನ್ನಲ್ಲೇ, ‘ಕಾಫಿನಾಡು’ ಚಿಕ್ಕಮಗಳೂರಿನಲ್ಲಿ ಕೇವಲ ಮೂರು ದಿನಗಳ ಅಂತರದಲ್ಲಿ ಎರಡು ಆಘಾತಕಾರಿ ಪ್ರಕರಣಗಳು ಪತ್ತೆಯಾಗಿವೆ.

ಒಂದೆಡೆ ಕಳಸದ ಹೋಟೆಲ್‌ನಲ್ಲಿ ವಡೆಯಲ್ಲಿ ಸತ್ತ ಹಲ್ಲಿ ಪತ್ತೆಯಾಗಿದ್ದರೆ, ಇನ್ನೊಂದೆಡೆ ಚಿಕ್ಕಮಗಳೂರು ನಗರದ ಪ್ರಸಿದ್ಧ ಬೇಕರಿಯಲ್ಲಿ ಎಕ್ಸ್‌ಪೈರಿ ದಿನಾಂಕ ಮುಗಿದ ಚಾಕೊಲೇಟ್ ಸಾಸ್ ಬಳಸಿ ಕೇಕ್ ತಯಾರಿಸುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

“ಈ ಕೇಕ್ ಅನ್ನು ಸಣ್ಣ ಮಕ್ಕಳು ತಿಂದಿದ್ದಾರೆ. ಒಂದು ವೇಳೆ ವಿಷಪೂರಿತವಾಗಿ ಮಕ್ಕಳಿಗೆ ಏನಾದರೂ ಹೆಚ್ಚು ಕಮ್ಮಿಯಾಗಿ ಆಸ್ಪತ್ರೆ ಸೇರಿದರೆ ಜವಾಬ್ದಾರಿ ಯಾರು? ಜನರ ಜೀವದ ಜೊತೆ ಚೆಲ್ಲಾಟವಾಡುತ್ತಿದ್ದೀರಾ?” ಎಂದು ಗ್ರಾಹಕರು ಬೇಕರಿ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಕ್ಲಾಸ್ ತಗೆದುಕೊಂಡಿದ್ದಾರೆ. “ಕೊಳೆತ ಕೇಕ್‌ಗೆ ಒಂದು ರೂಪಾಯಿಯನ್ನೂ ಕೊಡಲ್ಲ, ಈ ವಿಚಾರವನ್ನು ಇಲ್ಲಿಗೆ ಬಿಡುವುದಿಲ್ಲ” ಎಂದು ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments