ಮೂಡಿಗೆರೆ: ಬಿದರಹಳ್ಳಿ ಗ್ರಾಮದ ಹಳೇಯ ಶಾಲಾ ಕಟ್ಟಡವನ್ನು ಇದೀಗ ಕುರಿ ಕೊಟ್ಟಿಗೆಯಾಗಿ ಬಳಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಹೌದು ಮಕ್ಕಳಿಗೆ ಶಿಕ್ಷಣ ನೀಡುತ್ತಿದ್ದ ಶಾಲಾ ಕಟ್ಟಡ ಇಂದು ನಿರ್ಲಕ್ಷ್ಯಕ್ಕೊಳಗಾಗಿ, ಕುರಿಗಳನ್ನು ಕಟ್ಟುವ ಸ್ಥಳವಾಗಿ ಮಾರ್ಪಟ್ಟಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ವರ್ಷಗಳ ಹಿಂದೆ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಆಸರೆಯಾಗಿದ್ದ ಈ ಶಾಲಾ ಕಟ್ಟಡವನ್ನು ಸೂಕ್ತವಾಗಿ ನಿರ್ವಹಿಸದೆ ಬಿಟ್ಟಿರುವುದರಿಂದ ಕಟ್ಟಡದ ಸ್ಥಿತಿ ಹದಗೆಟ್ಟಿದೆ ಎನ್ನಲಾಗಿದೆ. ಇದೀಗ ಕಟ್ಟಡದೊಳಗೆ ಕುರಿಗಳನ್ನು ಕಟ್ಟಲಾಗುತ್ತಿದ್ದು, ಶಾಲೆಯ ಉದ್ದೇಶಕ್ಕಾಗಿ ನಿರ್ಮಿಸಲಾದ ಕಟ್ಟಡದ ದುರ್ಬಳಕೆಯಾಗುತ್ತಿದೆ ಎಂಬ ಆರೋಪ ಸ್ಥಳೀಯರಿಂದ ಕೇಳಿಬರುತ್ತಿದೆ.
ಶಿಕ್ಷಣಕ್ಕೆ ಮಹತ್ವ ನೀಡಬೇಕಾದ ಸಂದರ್ಭದಲ್ಲಿ ಶಾಲಾ ಕಟ್ಟಡವೊಂದು ಈ ರೀತಿಯಾಗಿ ಬಳಕೆಯಾಗುತ್ತಿರುವುದು ಸಂಬಂಧಪಟ್ಟ ಇಲಾಖೆಯ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಹಳೆಯ ಶಾಲಾ ಕಟ್ಟಡದ ಸ್ಥಿತಿ, ಅದರ ಮಾಲೀಕತ್ವ ಹಾಗೂ ಪ್ರಸ್ತುತ ಬಳಕೆಗೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆ ಮತ್ತು ಸ್ಥಳೀಯ ಆಡಳಿತ ಅಧಿಕಾರಿಗಳು ಪರಿಶೀಲನೆ ನಡೆಸಬೇಕು. ಕಟ್ಟಡವನ್ನು ಪುನರ್‌ನಿರ್ಮಾಣ ಅಥವಾ ದುರಸ್ತಿ ಮಾಡಿ ಸಾರ್ವಜನಿಕ ಉಪಯೋಗಕ್ಕೆ ಬಳಸುವ ಕುರಿತು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಸಾವಿರಾರು ಮಕ್ಕಳ ಭವಿಷ್ಯ ರೂಪಿಸಿದ್ದ ಶಾಲಾ ಕಟ್ಟಡ ಇಂದು ಕುರಿ ಕೊಟ್ಟಿಗೆಯಾಗಿರುವುದು ದುರಂತ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಸ್ಥಳ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಬೇಕುಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ವರದಿ:ಪುನೀತ್ ಕಡಿದಾಳು
9483811948
