Saturday, August 8, 2026
Homeಕ್ರೈಮ್ಇನ್‌ಸ್ಟಾದಲ್ಲಿ ಪರಿಚಯವಾದ ಯುವಕನೊಂದಿಗೆ ಮದ್ವೆಯಾಗಿದ್ದ ಹಾಸನ ಮೂಲದ ಗೃಹಿಣಿ ಸಾವು!

ಇನ್‌ಸ್ಟಾದಲ್ಲಿ ಪರಿಚಯವಾದ ಯುವಕನೊಂದಿಗೆ ಮದ್ವೆಯಾಗಿದ್ದ ಹಾಸನ ಮೂಲದ ಗೃಹಿಣಿ ಸಾವು!

Telegram Group
Join Now

ಇನ್‌ಸ್ಟಾದಲ್ಲಿ ಪರಿಚಯವಾದ ಯುವಕನೊಂದಿಗೆ ಮದ್ವೆಯಾಗಿದ್ದ ಗೃಹಿಣಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಹಿರೇಗೊಣ್ಣಾಗರ ಗ್ರಾಮದಲ್ಲಿ ನಡೆದಿದೆ.

ಪುಷ್ಪವತಿ (23) ಅನುಮಾನಾಸ್ಪದ ಸಾವನ್ನಪ್ಪಿರುವ ಗೃಹಿಣಿಯಾಗಿದ್ದು, ಮೂರು ತಿಂಗಳ ಹಸುಗೂಸು ಇದೆ. 2ನೇ ದಿನಗಳ ಹಿಂದೆ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆಯಾಗಿದ್ದು, ಪತಿ ಕುಟುಂಬಸ್ಥರ ವಿರುದ್ಧವೇ ಕೊಲೆ ಆರೋಪ ಕೇಳಿಬಂದಿದೆ.

ಮೂಲತಃ ಹಾಸನ ಜಿಲ್ಲೆಯ ಪುಷ್ಪವತಿ ಇನ್‌ಸ್ಟಾದಲ್ಲಿ ಪರಿಚಯವಾಗಿದ್ದ ಮರಿಯಪ್ಪ ಎಂಬಾತನನ್ನ ಪ್ರೀತಿಸಿ ಮದ್ವೆಯಾಗಿದ್ದರು. ಇದೀಗ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗ ಹಿನ್ನೆಲೆ ಪತಿ ಮನೆಯವರೇ ಹೊಡೆದು ನೇಣು ಹಾಕಿರುವುದಾಗಿ ಪುಷ್ಪವತಿ ಕುಟುಂಬಸ್ಥರು ಆರೋಪಿಸಿದ್ದಾರೆ. 2 ದಿನಗಳ ಹಿಂದೆ ಸಾವನ್ನಪ್ಪಿದ್ರು, ಶವ ಇನ್ನು ಅದೇ ಸ್ಥಳದಲ್ಲಿದೆ ಎಂದು ತಿಳಿದುಬಂದಿದೆ. 

ಹನುಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪುಷ್ಪವತಿ ಕುಟುಂಬಸ್ಥರು ನಿನ್ನೆಯಷ್ಟೇ ಹಾಸನದಿಂದ ಕೊಪ್ಪಳಕ್ಕೆ ಬಂದಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹ ಹಸ್ತಾಂತರಿಸುವ ಸಾಧ್ಯತೆಯಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments