Tuesday, August 11, 2026
Homeಕ್ರೈಮ್ಚಾರ್ಮಾಡಿ ಘಾಟ್​ನಲ್ಲಿ ಒಂಟಿ ಸಲಗ ಪ್ರತ್ಯಕ್ಷ: ಒಂದು ಗಂಟೆಗೂ ಹೆಚ್ಚು ಕಾಲ ವಾಹನ ಸವಾರರ ಪರದಾಟ!

ಚಾರ್ಮಾಡಿ ಘಾಟ್​ನಲ್ಲಿ ಒಂಟಿ ಸಲಗ ಪ್ರತ್ಯಕ್ಷ: ಒಂದು ಗಂಟೆಗೂ ಹೆಚ್ಚು ಕಾಲ ವಾಹನ ಸವಾರರ ಪರದಾಟ!

Telegram Group
Join Now

ಕೊಟ್ಟಿಗೆಹಾರ: ಚಾರ್ಮಾಡಿ ಘಾಟ್​ನಲ್ಲಿ ಒಂಟಿ ಸಲಗ ಪ್ರತ್ಯಕ್ಷವಾಗಿ ವಾಹನ ಸವಾರರಲ್ಲಿ ಆತಂಕ ಮೂಡಿಸಿದ ಘಟನೆ ನಡೆದಿದೆ.

ಹೌದು.. ಚಾರ್ಮಾಡಿ ಘಾಟ್‌ನ 10ನೇ ತಿರುವಿನ ಬಳಿ ರಸ್ತೆಯ ಮಧ್ಯೆ ಕಾಡಾನೆ ನಿಂತ ಪರಿಣಾಮ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತ್ತು.

ಭಾನುವಾರ ರಸ್ತೆಯ ಮಧ್ಯ ಭಾಗದಲ್ಲೇ ಒಂಟಿ ಸಲಗ ನಿಂತಿದ್ದರಿಂದ ವಾಹನ ಸವಾರರು ಭಯಭೀತರಾಗಿದ್ದರು. ಕೆಲ ವಾಹನ ಚಾಲಕರು ದೂರದಲ್ಲೇ ವಾಹನಗಳನ್ನು ನಿಲ್ಲಿಸಿ ಕಾದು ನಿಂತರೆ, ಇನ್ನೂ ಕೆಲವರು ಮೊಬೈಲ್‌ನಲ್ಲಿ ದೃಶ್ಯ ಸೆರೆಹಿಡಿಯಲು ಮುಂದಾದರು. ಇದರಿಂದಾಗಿ ರಸ್ತೆಯ ಎರಡೂ ಬದಿಗಳಲ್ಲೂ ವಾಹನಗಳು ಸಾಲುಗಟ್ಟಿ ನಿಂತು ಭಾರಿ ಟ್ರಾಫಿಕ್ ಜಾಮ್ ಉಂಟಾಯಿತು.

ಸ್ಥಳೀಯರು ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ವಾಹನ ಸವಾರರಿಗೆ ಎಚ್ಚರಿಕೆ ನೀಡಿ, ಆನೆಯ ಸಮೀಪ ಹೋಗದಂತೆ ಸೂಚನೆ ನೀಡಿದರು.

ಕಳೆದ ವಾರವು ಇದೇ ರೀತಿ ಈ ಕಾಡಾನೆ ರಸ್ತೆಯ ಮಧ್ಯೆ ಬಂದು ನಿಂತು ಪ್ರವಾಸಿಗರಿಗೆ ಹಾಗೂ ರಸ್ತೆಯಲ್ಲಿ ಸಂಚಾರ ಮಾಡುವ ಪ್ರಯಾಣಿಕರಿಗೆ ತೊಂದರೆ ನೀಡಿದ್ದು, ಕಳೆದ ವಾರವೂ ಗಂಟೆಗಟ್ಟಲೆ ಈ ರಸ್ತೆಯಲ್ಲಿ ಟ್ರಾಫಿಕ್ ಜಾಬ್ ಉಂಟಾಗಿತ್ತು. ಈ ಕಾಡಾನೆ ಪದೇ ಪದೆ ಇದೇ ಭಾಗದಲ್ಲಿ ಸಂಚಾರ ಮಾಡುತ್ತಿದ್ದು, ಯಾರ ಭಯವೂ ಇಲ್ಲದೆ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಬಂದು ನಿಲ್ಲುತ್ತಿದೆ. ಕೂಡಲೇ ಈ ಕಾಡಾನೆಯನ್ನು ಬೇರೆಡೆ ಸ್ಥಳಾಂತರ ಮಾಡಿ, ಯಾವುದೇ ಭಯವಿಲ್ಲದೆ ಈ ರಸ್ತೆಯಲ್ಲಿ ಪ್ರಯಾಣ ಮಾಡಲು ಅನುಕೂಲ ಮಾಡಿ ಕೊಡಬೇಕು ಎಂದು ಪ್ರಯಾಣಿಕರು ಹಾಗೂ ಸ್ಥಳೀಯರು ಅರಣ್ಯ ಇಲಾಖೆಗೆ ಮನವಿ ಮಾಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments