ಮೂಡಿಗೆರೆ: ಚಾರ್ಮಾಡಿ ಘಾಟಿ ಬಳಿ ತಿರುವಿನಲ್ಲಿ ಮರ ಸಾಗಾಟದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರ – ಚಾರ್ಮಾಡಿ ಘಾಟಿಯಲ್ಲಿ ಮುಂಜಾನೆ ಈ ಘಟನೆ ಸಂಭವಿಸಿದೆ.

ಘಟನೆಯಲ್ಲಿ ಲಾರಿ ಚಾಲಕ ಹಾಗೂ ಕ್ಲೀನರ್ ಸಣ್ಣ ಪುಟ್ಟ ಪೆಟ್ಟಾಗಿದ್ದು ಪ್ರಾಣಪಾಯದಿಂದ ಪಾರಾಗಿದ್ದಾರೆ. ಈ ಘಟನೆಯಿಂದ ಸುಮಾರು ಒಂದು ಗಂಟೆಯ ಕಾಲ ಘಾಟಿಯಲ್ಲಿ ಸಂಚಾರಕ್ಕೆ ಅಡ್ಡಿಯಾಗಿತ್ತು.
ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಆಗಮಿಸಿ, ಪರಿಶೀಲನೆ ನಡೆಸಿ ಸಂಚಾರಕ್ಕೆ ಕ್ಲಿಯರ್ ಮಾಡಿಕೊಟ್ಟಿದ್ದಾರೆ.
