ಶಿವಮೊಗ್ಗ : ಪೆಟ್ರೋಲ್ ಬಂಕ್ ಬಳಿಗೆ ಬಂದಿದ್ದ ಹೆಬ್ಬಾವನ್ನು ಹಿಡಿದು ಅರಣ್ಯಕ್ಕೆ ಬಿಡಲಾಗಿದೆ.
ಭದ್ರಾವತಿ ತಾಲೂಕಿನ ಅರಹತೊಳಲು ಕೈಮರದಲ್ಲಿರುವ ಪೆಟ್ರೋಲ್ ಬಂಕ್ ಬಳಿ ಹೆಬ್ಬಾವು ಕಾಣಿಸಿಕೊಂಡಿತ್ತು. ಈ ಬಗ್ಗೆ ಮಾಹಿತಿ ಅರಿತ ಬಾಳೆಹೊನ್ನೂರು ಸಿಪಿಐ ಲಕ್ಷ್ಮೀಪತಿ ಹಾಗೂ ಸ್ಥಳೀಯರು ಸೇರಿಕೊಂಡು ಹೆಬ್ಬಾವನ್ನು ಸುರಕ್ಷಿತವಾಗಿ ಸೆರೆಹಿಡಿದರು. ಬಳಿಕ ಅದನ್ನು ಕಾಡಿಗೆ ಬಿಡಲಾಯಿತು. ಹೆಬ್ಬಾವನ್ನು ಕಂಡು ಜಗ ಭಯಭೀತರಾಗಿದ್ದರು.






