Wednesday, March 25, 2026
Homeಕ್ರೈಮ್ಹಾಸನ : ಮೃತದೇಹ ಕೊಂಡೊಯ್ಯುತ್ತಿದ್ದ ಅಂಬ್ಯುಲೆನ್ಸ್ ಹಾಗೂ ಆಪೆ ಆಟೋ ನಡುವೆ ಅಪಘಾತ; ನಾಲ್ವರಿಗೆ ಗಂಭೀರ...

ಹಾಸನ : ಮೃತದೇಹ ಕೊಂಡೊಯ್ಯುತ್ತಿದ್ದ ಅಂಬ್ಯುಲೆನ್ಸ್ ಹಾಗೂ ಆಪೆ ಆಟೋ ನಡುವೆ ಅಪಘಾತ; ನಾಲ್ವರಿಗೆ ಗಂಭೀರ ಗಾಯ

ಹಾಸನ : ಮೃತದೇಹ ಕೊಂಡೊಯ್ಯುತ್ತಿದ್ದ ಅಂಬ್ಯುಲೆನ್ಸ್ ಹಾಗೂ ಆಪೆ ಆಟೋ ನಡುವೆ ಅಪಘಾತ  ಸಂಭವಿಸಿ ನಾಲ್ವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಹಾಸನ ಜಿಲ್ಲೆ, ಚನ್ನರಾಯಪಟ್ಟಣ ಬೈಪಾಸ್‌ನಲ್ಲಿ ನಡೆದಿದೆ.

ಬೆಂಗಳೂರಿನಿಂದ ಮಂಗಳೂರು ಕಡೆಗೆ ಮೃತದೇಹ ಕೊಂಡೊಯ್ಯುತ್ತಿದ್ದ ಅಂಬ್ಯುಲೆನ್ಸ್ ಗೆ ಚನ್ನರಾಯಪಟ್ಟಣದಿಂದ ಬಾಗೂರು ಕಡೆಗೆ ಶುಂಠಿ ಕೀಳಲು ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಆಪೆ ಆಟೋ ಡಿಕ್ಕಿಯಾಗಿದೆ. ಬೈಪಾಸ್‌ ರಸ್ತೆಯಲ್ಲಿ ಎರಡು ವಾಹನಗಳ ನಡುವೆ ಮುಖಾಮುಖಿ ಅಪಘಾತವಾಗಿದೆ.

ಗಾಯಾಳುಗಳು ಹಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.ಅಂಬ್ಯುಲೆನ್ಸ್ ನಲ್ಲಿದ್ದ ಮೃತದೇಹವನ್ನು ಮತ್ತೊಂದು ಅಂಬ್ಯುಲೆನ್ಸ್ ಮೂಲಕ ರವಾನೆ ಮಾಡಲಾಗಿದೆ.ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ.ಚನ್ನರಾಯಪಟ್ಟಣ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!