Saturday, September 5, 2026
Homeಜಿಲ್ಲಾಸುದ್ದಿಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಆದರ್ಶ ಶೆಟ್ಟಿ ನೇಮಕ.

ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಆದರ್ಶ ಶೆಟ್ಟಿ ನೇಮಕ.

Telegram Group
Join Now

ಕೊಪ್ಪ:  ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಸಂಘಟನೆಯನ್ನು ಬಲಗೊಳಿಸುವ ಹಿನ್ನೆಲೆಯಲ್ಲಿ ಹಾಗೂ ಸಂಘಟನೆಯನ್ನು ರಾಜ್ಯದಾದ್ಯಂತ ಸಕ್ರಿಯಗೊಳಿಸಲು ಮಾನ್ಯ ಅಖಿಲ ಭಾರತ ಯುವ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಉದಯ್ ಭಾನು ಚಿಬ್ ರವರ ನಿರ್ದೇಶನದ ಮೇರೆಗೆ ಹಾಗೂ ಮಾನ್ಯ ಅಖಿಲ ಭಾರತ ಯುವ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಗಳು ಮತ್ತು ಕರ್ನಾಟಕ ಉಸ್ತುವಾರಿಗಳಾದ ಶ್ರೀ ನಿಗಮ್ ಭಂಡಾರಿ ಯವರ ಅನುಮೋದನೆಯೊಂದಿಗೆ ಕೊಪ್ಪ ತಾಲೂಕಿನ ನಿಲುವಾಗಿಲಿನ ಶ್ರೀ ಆದರ್ಶ್ ಶೆಟ್ಟಿ, ಅವರನ್ನು ಚಿಕ್ಕಮಗಳೂರು ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿಯನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ.

ತಮಗೆ ನೀಡಿರುವ ಜವಾಬ್ದಾರಿಯನ್ನು ವಹಿಸಿಕೊಂಡು, ಪ್ರದೇಶ ಕಾಂಗ್ರೆಸ್ ಸಮಿತಿ ಮಾನ್ಯ ಅಧ್ಯಕ್ಷರು, ಯುವ ಕಾಂಗ್ರೆಸ್ ಉಸ್ತುವಾರಿಗಳು, ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಗೂ ಹಿರಿಯ ಮುಖಂಡರ ಮಾರ್ಗದರ್ಶನ ಮತ್ತು ಸ್ಥಳೀಯ ನಾಯಕರುಗಳ ಸಹಕಾರದೊಂದಿಗೆ ಯುವ ಕಾಂಗ್ರೆಸ್ ಸಂಘಟನೆಯನ್ನು ಬಲಗೊಳಿಸಲು ಎಲ್ಲ ರೀತಿಯಲ್ಲಿ ಸಹಕರಿಸಬೇಕಾಗಿ ತಿಳಿಸಲಾಗಿದೆ.

ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀಜಿತ್ ಗೌಡ ಆದರ್ಶ ಶೆಟ್ಟಿಯವರನ್ನು ಅಭಿನಂದಿಸಿ ಮಾತನಾಡಿದ ಅವರು ಪಕ್ಷಕ್ಕಾಗಿ ದುಡಿದವರನ್ನು ಪಕ್ಷದ ನಾಯಕರು ಗುರುತಿಸಿ ಸ್ಥಾನಗಳನ್ನು ನೀಡುತ್ತಿರುವುದು ಯುವಕರಿಗೆ ಮತ್ತಷ್ಟು ಸಂಘಟನೆಯಲ್ಲಿ ತೊಡಗಿಸಿಕೊಳ್ಳುವುದಕ್ಕೆ ಸಹಕಾರಿಯಾಗಲಿದೆ.
ಪಕ್ಷದ ಮೇಲೆ ನಂಬಿಕೆಯಿಟ್ಟು ದುಡಿಯಿರಿ ಇಂದಲ್ಲ ನಾಳೆ ನಿಮ್ಮನ್ನು ಪಕ್ಷ ಗುರುತಿಸಲಿದೆ ಎಂದು ಕಾರ್ಯಕರ್ತರಿಗೆ ತಿಳಿಸಿದರು.

ವರದಿ : ಶಶಿ ಬೆತ್ತದಕೊಳಲು

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments