Tuesday, February 10, 2026
Homeಜಿಲ್ಲಾಸುದ್ದಿಆಲ್ದೂರು: ಬಿಜೆಪಿ ಯುವ ಮೋರ್ಚಾ, ಮಂಡಲ ವತಿಯಿಂದ ಬೃಹತ್ ರಕ್ತದಾನ ಶಿಬಿರ ಆಯೋಜನೆ

ಆಲ್ದೂರು: ಬಿಜೆಪಿ ಯುವ ಮೋರ್ಚಾ, ಮಂಡಲ ವತಿಯಿಂದ ಬೃಹತ್ ರಕ್ತದಾನ ಶಿಬಿರ ಆಯೋಜನೆ

ಆಲ್ದೂರು: ಪ್ರಧಾನಿ ನರೇಂದ್ರ ಮೋದಿ ಅವರ 75ನೇ ಜನ್ಮದಿನಾಚರಣೆ ಅಂಗವಾಗಿ ಜಿಲ್ಲಾಸ್ಪತ್ರೆಯ ಸಹಯೋಗದೊಂದಿಗೆ “ಬೃಹತ್ ರಕ್ತದಾನ ಶಿಬಿರ” ಹಾಗೂ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮವನ್ನು ಬಿಜೆಪಿ ಯುವ ಮೋರ್ಚಾ ಮತ್ತು ಬಿಜೆಪಿ ಮಂಡಲದ ವತಿಯಿಂದ ಆಲ್ದೂರು ಪಟ್ಟಣದಲ್ಲಿ ಹಮ್ಮಿಕೊಳ್ಳಲಾಯಿತು

ಬಿಜೆಪಿ ಮುಖಂಡ ದೀಪಕ್ ದೊಡ್ಡಯ್ಯ ಮಾತನಾಡಿ ಪ್ರಧಾನಿ ನರೇಂದ್ರ ಮೋದಿಯವರು ದೇಶ ಕಂಡ ಒಬ್ಬ ಅಪ್ರತಿಮ ಧಿಮಂತ ನಾಯಕ ಭಾರತ ಅವರ ನಾಯಕತ್ವದಲ್ಲಿ ಜಗತ್ತಿನ ಒಂದು ಬಲಿಷ್ಟ ರಾಷ್ಟ್ರವಾಗಿ ಹೊರಹೊಮ್ಮುತ್ತಿದೆ, ಅವರ ಹುಟ್ಟು ಹಬ್ಬದ ಪ್ರಯುಕ್ತ ಪಕ್ಷವು ವಿವಿಧ ಸಮಾಜ ಸೇವಾ ಕಾರ್ಯಗಳನ್ನು ರಾಜ್ಯಾದ್ಯಾಂತ ಹಮ್ಮಿಕೊಂಡಿದೆ. ಇಡೀ ವಿಶ್ವವೇ ಇಂದು ಭಾರತದ ಕಡೆಗೆ ತಿರುಗಿ ನೋಡುತ್ತಿದೆ ಎಂದರೆ ಅದಕ್ಕೆ ಮೋದಿಜಿ ಅವರು ನಡೆಸಿರುವ ಉತ್ತಮ ಆಡಳಿತ ಕಕಾರಣವಾಗಿದೆ ಎಂದರು.

ಅಂತಹ ದೇವತಾ ಪುರುಷ ಮಹಾನ್ ವ್ಯಕ್ತಿಯ ಜನ್ಮದಿನದಂದು ಬಿಜೆಪಿ ಕಾರ್ಯಕರ್ತರು ರಕ್ತದಾನ ಶಿಬಿರ ಆಯೋಜಿಸಿ ಯಶಸ್ವಿಗೆ ಮುಂದಾಗಿರುವದು ಸಂತಸ ಪಡುವಂತಾಗಿದೆ.

ಮುಂದಿನ ದಿನಗಳಲ್ಲಿ ಬಿಜೆಪಿ ಪಕ್ಷದ ಇನ್ನಷ್ಟು ಗಟ್ಟಿಯಾಗಿ ನೆಲೆಯೂರಲಿ ಮೋದಿಜಿ ಅವರ ಕೊಡುಗೆ ದೇಶಕ್ಕೆ ಇನ್ನಷ್ಟು ಲಭಿಸಲಿ ಎಂದು ಹೇಳಿದರು.

ಬಿಜೆಪಿ ಯುವ ಮುಖಂಡ ಸಂತೋಷ್ ಕೋಟ್ಯಾನ್ ಮಾತನಾಡಿ ಅನ್ನದಾನ, ವಿದ್ಯಾದಾನ, ನೇತ್ರದಾನ ಹಾಗೂ ರಕ್ತದಾನವು ಅತಂತ್ಯ ಶ್ರೇಷ್ಠವಾದ ಕಾರ್ಯಗಳಾಗಿವೆ.

ಪ್ರತಿಯೊಬ್ಬರು ಇಂತಹ ಪ್ರವೃತ್ತಿಯನ್ನು ಬೆಳೆಸಿಕೊಂಡಾಗ ಮಾತ್ರ ಬದುಕು ಸಾರ್ಥಕವಾಗುತ್ತದೆ ಎಂದರು.

ನೂರಕ್ಕೂ ಅಧಿಕ ಸಂಖ್ಯೆ ಯಲ್ಲಿ ರಕ್ತದಾನಿಗಳು ರಕ್ತದಾನ ಶಿಬಿರದಲ್ಲಿ ತಮ್ಮನ್ನು ತೊಡಗಿಸಿಕೊಂಡರು. ಹಾಗೂ ಆರೋಗ್ಯ ತಪಾಸಣೆ ಮಾಡಿಸಿಕೊಂಡರು

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಮುಖರು, ಮಹಿಳಾ ಬಿಜೆಪಿ ಘಟಕ, ಅಲ್ದುರು ಮಂಡಲದ ಮಿಥುನ್ ಹಳಿಯೂರು, ಸಿಂಧೂ ಕುಮಾರ್, ಸುಪ್ರೀತ್ ಅರೇನೂರು, ಶಶಿ ಆಲ್ದುರ್ ಸೇರಿದಂತೆ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ :ಪುನೀತ್ ಕಡಿದಾಳ್ 

9483811948

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!