Saturday, February 7, 2026
Homeಕ್ರೈಮ್ಆಲ್ದೂರು:  5 ತಿಂಗಳ ಹಿಂದಷ್ಟೇ ಮದುವೆ: ವಿಚ್ಛೇದನಕ್ಕೆ ಸಿದ್ಧವಾದ ಪತ್ನಿಯನ್ನು  ಬರ್ಬರವಾಗಿ ಕೊಲೆಗೈದ ಪತಿ!

ಆಲ್ದೂರು:  5 ತಿಂಗಳ ಹಿಂದಷ್ಟೇ ಮದುವೆ: ವಿಚ್ಛೇದನಕ್ಕೆ ಸಿದ್ಧವಾದ ಪತ್ನಿಯನ್ನು  ಬರ್ಬರವಾಗಿ ಕೊಲೆಗೈದ ಪತಿ!

ಚಿಕ್ಕಮಗಳೂರು: ಪತಿಯೇ ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ ಘಟನೆ ಚಿಕ್ಕಮಗಳೂರು ತಾಲೂಕಿನ ಆಲ್ದೂರು ಪಟ್ಟಣ ಸಮೀಪದ ಹವ್ವಳ್ಳಿ ಗ್ರಾಮದಲ್ಲಿ ನಡೆದಿದೆ.

ಹತ್ಯೆಯಾದ ಮಹಿಳೆಯನ್ನು ನೇತ್ರಾ (32) ಎಂದು ಗುರುತಿಸಲಾಗಿದೆ. ಪತಿ ನವೀನ್ ವಿರುದ್ಧ ಕೊಲೆ ಆರೋಪ ಕೇಳಿಬಂದಿದೆ. ಐದು ತಿಂಗಳ ಹಿಂದಷ್ಟೇ ಇವರಿಬ್ಬರ ಮದುವೆಯಾಗಿತ್ತು. ಚಾಕು ಇರಿತದಿಂದ ಗಂಭೀರವಾಗಿ ಗಾಯಗೊಂಡಿದ್ದ ನೇತ್ರಾಳನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಆಕೆ ಸಾವನ್ನಪ್ಪಿದ್ದಾಳೆ.

ನವೀನ್ ಜೊತೆ ಕಳೆದ 5 ತಿಂಗಳ ಹಿಂದೆ ವಿವಾಹವಾಗಿದ್ದರು. ಆದರೆ, ಮದುವೆಯಾದ ಕೆಲ‌‌ ದಿನಗಳಲ್ಲಿ ಗಂಡನಿಂದ ದೂರವಾದ ನೇತ್ರಾವತಿ, ತನ್ನ ಹವ್ವಳ್ಳಿ ಗ್ರಾಮದ ತವರು ಮನೆ ಸೇರಿದ್ದರು. ನವೀನ್, ನೇತ್ರಾವತಿಯ ಕುಟುಂಬದ ಹಿರಿಯರು ರಾಜಿ ಪಂಚಾಯಿತಿ ಮಾಡಿ ಇಬ್ಬರನ್ನು ಒಂದು ಮಾಡುವ ಪ್ರಯತ್ನ ಮಾಡಿದ್ದರು. ಆದರೆ ಯಾವುದೇ ಪ್ರಯೋಜನವಾಗಿರಲಿಲ್ಲ. ಗಂಡ ನವೀನ್​ನಿಂದ‌ ಸಂಪೂರ್ಣ ‌ದೂರವಾಗುವ ಯೋಚನೆ ಮಾಡಿದ್ದ ನೇತ್ರಾವತಿ ವಿಚ್ಛೇದನ ನೀಡಲು ಸಿದ್ದತೆ ನಡೆಸಿದ್ದರು.  ಇದರಿಂದ ಆಕೆಯ ತವರು ಮನೆಗೆ ಹೋಗಿ ಪತಿ ಚಾಕು ಇರಿದಿದ್ದಾನೆ ಎಂದು ನೇತ್ರಾ ಪೋಷಕರು ಆರೋಪಿಸಿದ್ದಾರೆ.

ಈ ಸಂಬಂಧ ಆಲ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!