Tuesday, August 11, 2026
Homeಕ್ರೈಮ್ಆಲ್ದೂರು: ಪತ್ನಿಯ ಕತ್ತು ಸೀಳಿ ಕೊಲೆ ಕೇಸ್: ಪತಿ ಸೇರಿ ಮೂವರ ಬಂಧನ

ಆಲ್ದೂರು: ಪತ್ನಿಯ ಕತ್ತು ಸೀಳಿ ಕೊಲೆ ಕೇಸ್: ಪತಿ ಸೇರಿ ಮೂವರ ಬಂಧನ

Telegram Group
Join Now

ಚಿಕ್ಕಮಗಳೂರು: ಕೌಟುಂಬಿಕ ಕಲಹ ಹಿನ್ನಲೆ ಪತ್ನಿಯನ್ನು ಪತಿ ಕತ್ತುಸೀಳಿ ಕೊಲೆ ಮಾಡಿರುವ ಪ್ರಕರಣದಲ್ಲಿ ಮೃತ ಮಹಿಳೆಯ ಪತಿ ಮತ್ತು ಮಾವನನ್ನು ಬಂಧಿಸಿ, ಅತ್ತೆಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಆಲ್ದೂರು ಸಮೀಪದ ಹೊಸಳ್ಳಿ ಗ್ರಾಮದ ನೇತ್ರಾವತಿ ಸಕಲೇಶಪುರದ ನವೀನ್‌ನನ್ನು ಐದು ತಿಂಗಳ ಹಿಂದೆ ಧರ್ಮಸ್ಥಳದಲ್ಲಿ ಮದುವೆಯಾಗಿದ್ದರು. ಕೌಟುಂಬಿಕ ಕಲಹದ ಹಿನ್ನಲೆ ಪತಿ ನವೀನ್‌ ಸಕಲೇಶಪುರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇಬ್ಬರನ್ನು ಸಖಿ ಕೇಂದ್ರಕ್ಕೆ ಕರೆಸಿ ಕೌನ್ಸಿಲಿಂಗ್‌ ಕೂಡ ನಡೆಸಲಾಗಿತ್ತು. ಆದರೆ, ಇಬ್ಬರ ನಡುವೆ ಹೊಂದಾಣಿಕೆ ಬಾರದ ಹಿನ್ನಲೆ ನೇತ್ರಾವತಿ ಕಳೆದ ಮೂರು ತಿಂಗಳಿಂದ ಆಲ್ದೂರು ಸಮೀಪದ ಹೊಸಳ್ಳಿ ಗ್ರಾಮದಲ್ಲಿನ ತವರು ಮನೆ ಸೇರಿದ್ದರು ಎಂದರು.

ಅ.12ರ ಸಂಜೆ 6:30ಕ್ಕೆ ನೇತ್ರಾವತಿ ಮನೆಗೆ ಆಗಮಿಸಿದ ಪತಿ ನವೀನ್‌ ನೇತ್ರಾವತಿಯ ಕತ್ತು ಸೀಳಿ ಕೊಲೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದ. ಗಂಭೀರ ಗಾಯಗೊಂಡಿದ್ದ ನೇತ್ರಾವತಿ ಅವರನ್ನು ಆಸ್ಪತ್ರೆಗೆ ದಾಖಲಿಸಿದರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ನೇತ್ರಾವತಿ ಸಂಬಂಧಿಕರು ನೀಡಿದ ದೂರಿನನ್ವಯ ಕಾರ್ಯಪ್ರವೃತ್ತರಾದ ಆಲ್ದೂರು ಪೊಲೀಸ್‌ ಠಾಣೆಯ ಪೊಲೀಸರು ನೇತ್ರಾವತಿ ಅವರ ಪತಿ ನವೀನ್‌, ಅವರ ಮಾವ ಮಂಜೇಗೌಡ ಅವರನ್ನು ಬಂಧಿಸಿದ್ದಾರೆ. ನೇತ್ರಾವತಿ ಅತ್ತೆ ಕುಸುಮ ಅವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆಂದು ತಿಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments