Tuesday, July 14, 2026
Homeಜಿಲ್ಲಾಸುದ್ದಿಬಣಕಲ್ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಅದ್ಭುತ ಸಾಧನೆ: ಶೇ.100ರಷ್ಟು ಫಲಿತಾಂಶ!

ಬಣಕಲ್ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಅದ್ಭುತ ಸಾಧನೆ: ಶೇ.100ರಷ್ಟು ಫಲಿತಾಂಶ!

Telegram Group
Join Now

ಮೂಡಿಗೆರೆ: 2025-26ನೇ ಸಾಲಿನ ದ್ವಿತೀಯ ಪದವಿ ಪೂರ್ವ ಪರೀಕ್ಷೆಯಲ್ಲಿ ಬಣಕಲ್ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ ತಂದು  ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿದ್ದಾರೆ.

ಹೌದು .. ಬಣಕಲ್ ಪದವಿ ಪೂರ್ವ ಕಾಲೇಜಿನಲ್ಲಿ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ವಿಭಾಗದಲ್ಲಿ ಒಟ್ಟು 35 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಅವರಲ್ಲಿ ವಿದ್ಯಾರ್ಥಿನಿ ಕು.ನೊಫಿಯಾ 537 ಅಂಕ ಪಡೆದು ಉನ್ನತ ಶ್ರೇಣಿಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದು ವಿದ್ಯಾರ್ಥಿನಿ ಕು.ರೇಖಾ 532 ಅಂಕ ಪಡೆದು ಕಾಲೇಜಿಗೆ ದ್ವಿತೀಯಾ ಸ್ಥಾನ ಪಡೆದುಕೊಂಡಿದ್ದಾರೆ.26 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಪಾಸಾಗಿದ್ದರೆ,7ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾರೆ ಎಂದು ಪ್ರಾಂಶುಪಾಲ ಸತೀಶ್ ಮಾಹಿತಿ ನೀಡಿದ್ದಾರೆ.

ಉಪನ್ಯಾಸಕರಾದ ಮಲ್ಲಿಕಾರ್ಜುನ್,ಜೈಶಂಕರ್,ಕಾಲೇಜು ಅಭಿವೃದ್ದಿ ಸಮಿತಿಯ ವಿಜೇಂದ್ರಗೌಡ,ಬಿ.ಎ.ಉಮ್ಮರ್,ಬಿ.ಶಿವರಾಮ ಶೆಟ್ಟಿ,ಬಿ.ಎಸ್.ವಿವೇಕ್ ಹರ್ಷ ವ್ಯಕ್ತ ಪಡಿಸಿದ್ದಾರೆ.

ಕೊಟ್ಟಿಗೆಹಾರದ ತರುವೆ ಏಕಲವ್ಯ ಶಾಲೆಯು ಪಿಯುಸಿಯಲ್ಲಿ ಶೇ 82 ಫಲಿತಾಂಶ ಬಂದಿದ್ದು.ಅವರಲ್ಲಿ ವಾಣಿಜ್ಯ ವಿಭಾಗದಲ್ಲಿ ಶೇ100 ಹಾಗೂ ವಿಜ್ಞಾನ ವಿಭಾಗದಲ್ಲಿ ಶೇ82.35 ಫಲಿತಾಂಶ ಶಾಲೆಗೆ ಬಂದಿದೆ.ಅದರಲ್ಲಿ ವಾಣಿಜ್ಯ ವಿಭಾಗದಲ್ಲಿ ವಿದ್ಯಾರ್ಥಿನಿ ಸಿ.ಡಿ.ಲಕ್ಷ್ಮಿ 551 ಅಂಕ ಪಡೆಯುವ ಮೂಲಕ ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದಾಳೆ.

ವಿಜ್ಞಾನ ವಿಭಾಗದಲ್ಲಿ ವಿದ್ಯಾರ್ಥಿನಿ .ಟಿ.ಆರ್.ಅಮೂಲ್ಯ 519 ಅಂಕ ಪಡೆದು ಕಾಲೇಜಿಗೆ ದ್ವಿತೀಯ ಸ್ಥಾನ ಪಡೆದಿದ್ದಾರೆ.

ಒಟ್ಟು 26 ಮಕ್ಕಳು ಪರೀಕ್ಷೆ ಬರೆದಿದ್ದು ಅದರಲ್ಲಿ 23 ಮಕ್ಕಳು ಪಾಸಾಗಿದ್ದಾರೆ ಎಂದು ಪ್ರಾಂಶುಪಾಲರಾದ ಸತೀಶ್ ಜೈಸ್ವಾಲ್ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments