Monday, April 27, 2026
Homeಜಿಲ್ಲಾಸುದ್ದಿಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಾಂತಿಗ್ರಾಮದಲ್ಲಿ ಅಮೃತ ಮಹೋತ್ಸವ ಕಾರ್ಯಕ್ರಮ

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಾಂತಿಗ್ರಾಮದಲ್ಲಿ ಅಮೃತ ಮಹೋತ್ಸವ ಕಾರ್ಯಕ್ರಮ

ಜಯಪುರ: ಕೊಪ್ಪ ತಾಲೂಕಿನ ಶಾಂತಿಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ 75 ವರ್ಷದ ಸಂಭ್ರಮ ಹೀಗಾಗಿ ನಾಳೆಯಿಂದ ಎರಡು ದಿನ ಅಮೃತ ಮಹೋತ್ಸವ ಮತ್ತು ಗುರುವಂದನೆ ಹಾಗೂ ಹಿರಿಯ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮ ನಡೆಯಲಿದೆ.

ಶಾಂತಿಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಕ್ರೀಡಾಂಗಣದಲ್ಲಿ ಕಾರ್ಯಕ್ರಮವೂ ನಡೆಯಲಿದ್ದು, ಮಾನ್ಯ ಅಧ್ಯಕ್ಷರು ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮ ಬೆಂಗಳೂರು ಹಾಗೂ ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಟಿ ಡಿ ರಾಜೇಗೌಡ ಉದ್ಘಾಟನೆ ಮಾಡಲಿದ್ದಾರೆ.

ಏಪ್ರಿಲ್ 28 ಮಂಗಳವಾರ ಮಧ್ಯಾಹ್ನ ಅದ್ಧೂರಿ ಮೆರವಣಿಗೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ಸಿಗಲಿದೆ. ನಂತರ ಸಭಾ ಕಾರ್ಯಕ್ರಮಗಳು ನಡೆಯಲಿದ್ದು ಸಂಜೆ 7 ಗಂಟೆಗೆ ಶಿವದೂತ ಗುಳಿಗ ಎಂಬ ನಾಟಕ ಇರಲಿದೆ.

ಏಪ್ರಿಲ್ 29 ಬುಧವಾರದಂದು ಬೆಳಗ್ಗೆ 11 ಗಂಟೆಯಿಂದ ಸಭಾ ಕಾರ್ಯಕ್ರಮಗಳ ಜೊತೆ ಹಿರಿಯ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಮತ್ತು ಗುರುವಂದನ ಕಾರ್ಯಕ್ರಮಗಳು ಹಾಗೂ ಸಂಜೆ ಹಿರಿಯ ವಿದ್ಯಾರ್ಥಿಗಳು ಮತ್ತು ಶಾಲಾ ಮಕ್ಕಳಿಂದ ನೃತ್ಯ ಮತ್ತು ಮನರಂಜನ ಕಾರ್ಯಕ್ರಮ ನಡೆಯಲಿವೆ ಎಂದು ಅಮೃತ ಮಹೋತ್ಸವ ಆಚರಣ ಸಮಿತಿ ಅಧ್ಯಕ್ಷರಾದ ಶ್ರೇಣಿಕ್ ಜೈನ್ ಮಾಹಿತಿ ನೀಡಿದ್ದಾರೆ.

ಏಪ್ರಿಲ್ 29 ಬುಧವಾರ ಅಮೃತ ಮಹೋತ್ಸವದ ಪ್ರಯುಕ್ತ ಶ್ರೀ ಅಭಿನವ ವಿದ್ಯಾತೀರ್ಥ ಮಲ್ಟಿ ಸ್ಪೇಷಾಲಿಟಿ ಆಸ್ಪತ್ರೆ ಶೃಂಗೇರಿ ಇವರ ವತಿಯಿಂದ ಆರೋಗ್ಯ ತಪಾಸಣೆ ಶಿಬಿರ ಇರುತ್ತದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!