ಮೂಡಿಗೆರೆ: ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ 111ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅತ್ಯುನ್ನತ ಅಂಕ ಗಳಿಸಿದ ಹಾಗೂ ಕನ್ನಡ ವಿಷಯದಲ್ಲಿ 125ಕ್ಕೆ 125 ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಪಟ್ಟಣದ ಪ್ರವಾಸಿ ರಂಗಮಂದಿರದಲ್ಲಿ ಗೌರವಪೂರ್ವಕವಾಗಿ ಆಯೋಜಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಡಿ.ಕೆ. ಲಕ್ಷ್ಮಣ್ ಗೌಡ ವಹಿಸಿ ಮಾತನಾಡಿ, ಕನ್ನಡಾಭಿಮಾನವನ್ನು ಯುವ ಪೀಳಿಗೆಯಲ್ಲಿ ಬೆಳೆಸುವುದರೊಂದಿಗೆ ವಿದ್ಯಾರ್ಥಿಗಳು ಸರ್ವಾಂಗೀಣ ಸಾಧನೆಗೈದು ಸಮಾಜದ ಉತ್ತಮ ನಾಗರಿಕರಾಗಬೇಕು ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮವನ್ನು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಮತಿ ಮೀನಾಕ್ಷಿ ಉದ್ಘಾಟಿಸಿ, ಪರಿಶ್ರಮ ಮತ್ತು ಶಿಸ್ತು ವಿದ್ಯಾರ್ಥಿಗಳ ಯಶಸ್ಸಿನ ಮೂಲವೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಭುವನೇಶ್ರೀ ಭಾವಚಿತ್ರಕ್ಕೆ ಜಿಲ್ಲಾ ಮಹಿಳಾ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಶ್ರೀಮತಿ ನಿರ್ಮಲಾ ಮಂಚೇಗೌಡ ಪುಷ್ಪಾರ್ಚನೆ ಸಲ್ಲಿಸಿದರು.
ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಎಚ್.ಎಂ. ಶಾಂತಕುಮಾರ್ ಉಪನ್ಯಾಸ ನೀಡಿ, ಕನ್ನಡ ಸಾಹಿತ್ಯದ ಶ್ರೀಮಂತ ಪರಂಪರೆಯನ್ನು ಉಳಿಸಿ ಬೆಳೆಸುವ ಹೊಣೆಗಾರಿಕೆ ಯುವಕರ ಮೇಲಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಸಂಚಾಲಕರಾದ ಮಗ್ಗಲಮಕ್ಕಿ ಗಣೇಶ್, ಹೋಬಳಿ ಅಧ್ಯಕ್ಷರಾದ ರವಿ ಕುನ್ನಹಳ್ಳಿ, ಆನೆದಿಬ್ಬ ನವೀನ್, ಲೋಕೇಶ್ ಬೆಟ್ಟಗೆರೆ, ಯುವ ಘಟಕದ ಅಧ್ಯಕ್ಷರಾದ ಚಂದ್ರು ಒಡೆಯರ್, ತಾಲೂಕು ಮಹಿಳಾ ಘಟಕದ ಅಧ್ಯಕ್ಷರಾದ ರೇಖಾ ರವಿರಾಜ್, ಜಿಲ್ಲಾ ಪಂಚಾಯಿತಿ ಸದಸ್ಯರಾದ ಎಂ.ಎಸ್. ಅನಂತ್ ಉಪಸ್ಥಿತರಿದ್ದರು.
ಕನ್ನಡ ಸಾಹಿತ್ಯ ಪರಿಷತ್ ಪ್ರಧಾನ ಕಾರ್ಯದರ್ಶಿಗಳಾದ ಸುಚಿತ್ರ ಪ್ರಸನ್ನ, ಕೋಶಾಧ್ಯಕ್ಷರಾದ ಆರ್. ಪ್ರಕಾಶ್ ಹಾಗೂ ಕಾರ್ಯಕರ್ತರಾದ ವಿದ್ಯಾ ವಿಜಯಲಕ್ಷ್ಮಿ, ದಾಕ್ಷಾಯಿಣಿ,ಶಿಕ್ಷರಾದ ಬಿ.ಆರ್. ನವೀನ್, ಎಂ.ಎಸ್. ನಾಗರಾಜ್ ಸೇರಿದಂತೆ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
