ಅರಸೀಕೆರೆ : ಅನುಮಾನಾಸ್ಪದವಾಗಿ ಚಿರತೆ ಒಂದು ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ರಾಂಪುರ ಗ್ರಾಮದ ಬಳಿ ನಡೆದಿದೆʼ
ಅರಸೀಕೆರೆ ಸುತ್ತಮುತ್ತಲ ಬೆಟ್ಟ ಗುಡ್ಡಗಳಲ್ಲಿ ಚಿರತೆಗಳು ಹೆಚ್ಚಾಗಿದ್ದು ಜಾನುವಾರುಗಳನ್ನು ಒತ್ತೊಯ್ಯುತ್ತಿರುವ ಪ್ರಕರಣಗಳು ವರದಿಯಾಗಿತ್ತು ಚಿರತೆಗಳ ಹಾವಳಿಯಿಂದ ಗ್ರಾಮಸ್ಥರು ಜಮೀನಿನಲ್ಲಿ ಕೆಲಸ ಮಾಡಲು ಕಷ್ಟವಾಗುತ್ತಿದ್ದು ಮನೆಯಿಂದ ಹೊರಗಡೆ ಬರಲು ಹೆದರುತ್ತಿದ್ದರು.
ಇದೀಗ ರಾಂಪುರ ಬಳಿ ಅರಣ್ಯ ಪ್ರದೇಶದಲ್ಲಿ ಅನುಮಾನಾಸ್ಪದವಾಗಿ ಚಿತರೆಯೊಂದು ಸಾವನ್ನಪ್ಪಿದ್ದು ಮೈಮೇಲೆ ರಕ್ತದ ಕಲೆಗಳಿದ್ದು ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪ್ರಕರಣ ಸಂಬಂಧ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.